ತಮಿಳುನಾಡಿನ 'ಅಮ್ಮ'ನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ

7

ತಮಿಳುನಾಡಿನ 'ಅಮ್ಮ'ನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ

Published:
Updated:
ತಮಿಳುನಾಡಿನ 'ಅಮ್ಮ'ನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ

ಚೆನ್ನೈ: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ, ರಾಜಾಜಿ ಹಾಲ್‍ನಲ್ಲಿ ಜಯಲಲಿತಾ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ನಿನ್ನೆ ವಿಧಿವಶರಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಚೆನ್ನೈನ ರಾಜಾಜಿ  ಹಾಲ್‍ನಲ್ಲಿರಿಸಲಾಗಿದೆ.

ಜಯಾ ಅವರ ಅಂತಿಮ ದರ್ಶನ ಪಡೆದ ಮೋದಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮೋದಿಯವರನ್ನು ನೋಡಿದ ಕೂಡಲೇ ತಮಿಳುನಾಡಿನ ನೂತನ ಸಿಎಂ ಪನ್ನೀರ್ ಸೆಲ್ವಂ ಕಣ್ಣೀರಾಗಿದ್ದು. ಅವರಿಗೆ ಮೋದಿ ಸಾಂತ್ವನ ಹೇಳಿದ್ದಾರೆ.

ರಾಜಾಜಿ ಹಾಲ್ ಮುಂದೆ ಅಮ್ಮನ ಅಂತಿಮ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ನೆರೆದಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

ಇಂದು ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, 4.30ಕ್ಕೆ ಅಂತಿಮ ಸಂಸ್ಕಾರ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry