ಭಾನುವಾರ, ಜೂಲೈ 5, 2020
27 °C

ಇಂಡೋನೇಷ್ಯಾದಲ್ಲಿ ಭೂಕಂಪ: 54 ಮಂದಿ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಇಂಡೋನೇಷ್ಯಾದಲ್ಲಿ ಭೂಕಂಪ: 54 ಮಂದಿ ಸಾವು

ಮ್ಯೆರುಡು: ಇಂಡೋನೇಷ್ಯಾದ ಅಕೆಹ್‌ ಪ್ರಾಂತ್ಯದಲ್ಲಿ ಬುಧವಾರ ಭೂಕಂಪ ಸಂಭವಿಸಿದ್ದು, 54 ಮಂದಿ ಸಾವಿಗೀಡಾಗಿದ್ದಾರೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರಿಕ್ಟರ್‌ ಮಾಪಕದಲ್ಲಿ ಕಂಪನದ ತೀವ್ರತೆ 6.5ರಷ್ಟು ದಾಖಲಾಗಿದ್ದು, ಕಟ್ಟಡಗಳು ಕುಸಿದು ಹಾನಿಯಾಗಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಮಸೀದಿ ಹಾಗೂ ವ್ಯಾಪಾರಿ ಮಳಿಗೆಗಳ ಕಟ್ಟಡಗಳು ಕುಸಿದಿವೆ. ಘಟನೆಯಲ್ಲಿ 54 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.