ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬ್ದುಲ್‌ ಕಲಾಂ ಸಾಧನೆ ಶಾಶ್ವತ

Last Updated 15 ಡಿಸೆಂಬರ್ 2016, 6:14 IST
ಅಕ್ಷರ ಗಾತ್ರ

ಕೋಲಾರ: ‘ವಿಜ್ಞಾನ ಕೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಬ್ದುಲ್ ಕಲಾಂರ ನೆನಪು ಜನಮಾನಸದಲ್ಲಿ ಶಾಶ್ವಾತವಾಗಿ ಉಳಿದಿದೆ’ ಎಂದು ಆತ್ಮವಿಶ್ವಾಸ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಭಾರದ್ವಾಜ್ ಅಭಿಪ್ರಾಯಪಟ್ಟರು.

ಆತ್ಮವಿಶ್ವಾಸ ವೇದಿಕೆ ವತಿಯಿಂದ ನಗರದ ಸರ್ವಜ್ಞ ಉದ್ಯಾನದಲ್ಲಿ ಶಿಟೋರಿಯೊ ಕರಾಟೆ ಶಾಲಾ ವಿದ್ಯಾರ್ಥಿಗಳಿಗಾಗಿ ಬುಧವಾರ ಆಯೋಜಿಸಿದ್ದ ಅಬ್ದುಲ್ ಕಲಾಂ ಕುರಿತ ವಿಚಾರ ಸಂಕಿರಣದಲ್ಲಿ  ಮಾತನಾಡಿದರು.

ತಮಿಳುನಾಡಿನ ಬಡ ಕುಟುಂಬದಲ್ಲಿ ಜನಿಸಿದ ಕಲಾಂ ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳನ್ನು ಮಾಡಿ ಜಾಗತಿಕವಾಗಿ ಗುರುತಿಸಿಕೊಂಡರು. ಬಾಹ್ಯಾಕಾಶ, ಕ್ಷಿಪಣಿ, ಭೌತ ವಿಜ್ಞಾನ ಕ್ಷೇತ್ರದಲ್ಲಿ ಕಲಾಂ ಅವರು ಮಾಡಿದ ಸಂಶೋಧನೆಗಳು ಜಾಗತಿಕವಾಗಿ ಮನ್ನಣೆ ಪಡೆದಿವೆ. ಅವರ ಸಾಧನೆ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.

ವಿಜ್ಞಾನ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ಕಲಾಂ ಅವರಿಗೆ ಸಾಕಷ್ಟು ಪ್ರಶಸ್ತಿಗಳು ಬಂದಿವೆ ಎಂದು ಹೇಳಿದರು. ಕರಾಟೆ ತರಬೇತುದಾರ ವೆಂಕಟರಾಮ್, ವೇದಿಕೆಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ಆನಂದ್, ಸದಸ್ಯರಾದ ಸುರೇಂದ್ರಕುಮಾರ್, ವಿಷ್ಣು ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT