ಶುಕ್ರವಾರ, ಮೇ 27, 2022
26 °C

ಬಾಗ್ದಾದ್‌ನಲ್ಲಿ ಬಾಂಬ್‌ ದಾಳಿ:36 ಬಲಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಬಾಗ್ದಾದ್‌ನಲ್ಲಿ ಬಾಂಬ್‌ ದಾಳಿ:36 ಬಲಿ

ಬಾಗ್ದಾದ್‌: ನಗರದ ಜನನಿಬಿಡ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಬಾಂಬ್‌ ಆತ್ಮಾಹುತಿ ದಾಳಿಯಲ್ಲಿ 36  ಮಂದಿ ಸಾವಿಗೀಡಾಗಿದ್ದಾರೆ. ಇಸ್ಲಾಮಿಕ್‌ ಸ್ಟೇಟ್‌ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

 

ರಾಜಧಾನಿಯ ಈಶಾನ್ಯಭಾಗದಲ್ಲಿರುವ ಶಿಯಾ ಸಮುದಾಯದವರು ಬಹುಸಂಖ್ಯೆಯಲ್ಲಿರುವ ಸರ್ದ್‌ ಪಟ್ಟಣದಲ್ಲಿ ಕೆಲಸಕ್ಕಾಗಿ ಕಾಯುತ್ತಿದ್ದ 

ಕೂಲಿಕಾರ್ಮಿಕರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ.

 

ದಾಳಿಯಲ್ಲಿ 36ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ದಾಳಿ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಗೊಂಡಿತು. ದಾಳಿಯನ್ನು ‘ಹುತಾತ್ಮ ಕಾರ್ಯಾಚರಣೆ’ ಎಂದು ಐಎಸ್‌ನ ‘ಅಮಕ್‌’ ಸುದ್ದಿಸಂಸ್ಥೆ ತಿಳಿಸಿದೆ.

 

ಶನಿವಾರ ಬಾಗ್ದಾದ್‌ನ ಪ್ರಮುಖ ಮಾರುಕಟ್ಟೆಯಲ್ಲಿ ನಡೆದ ಬಾಂಬ್‌ ಸ್ಫೋಟದಲ್ಲಿ 27 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯನ್ನು ಐಎಸ್‌ ನಡೆಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.