ಫ್ಲೊರಿಡಾ: ಅಮೆರಿಕದ ಫ್ಲೊರಿಡಾದ ಫೋರ್ಟ್ ಲೌಡರ್ಡೇಲ್ ವಿಮಾನ ನಿಲ್ದಾಣದಲ್ಲಿ ಬಂದೂಕುಧಾರಿಯೊಬ್ಬ ಶುಕ್ರವಾರ (ಸ್ಥಳೀಯ ಕಾಲಮಾನ) ನಡೆಸಿದ ಗುಂಡಿನ ದಾಳಿಯಲ್ಲಿ 5 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.

ವಿಮಾನ ನಿಲ್ದಾಣದ ಲಗೇಜ್ ಇಳಿಸಿಕೊಳ್ಳುವ ಪ್ರದೇಶದಲ್ಲಿ (Baggage claim area) ಬಂದೂಕುಧಾರಿ ಮನಬಂದಂತೆ ಗುಂಡು ಹಾರಿಸಿದ್ದಾನೆ.

ದಾಳಿಕೋರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿಕೋರ ಅಲಾಸ್ಕಾ ಮೂಲದ ಎಸ್ಟೆಬನ್ ಸ್ಯಾಂಟಿಯಾಗೊ (26) ಎಂದು ಗುರುತಿಸಲಾಗಿದೆ. ಈತ ಇರಾಕ್ನ ನ್ಯಾಷನಲ್ ಗಾರ್ಡ್ನಲ್ಲಿ ಸೈನಿಕನಾಗಿದ್ದ. ಸೇವೆ ತೃಪ್ತಿದಾಯಕವಾಗಿಲ್ಲ ಎಂಬ ಕಾರಣ ನೀಡಿ ಕಳೆದ ವರ್ಷ ಈತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು ಎನ್ನಲಾಗಿದೆ.

ಎಸ್ಟೆಬನ್ ಸ್ಯಾಂಟಿಯಾಗೊ ಮನೋರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಎಂದು ಆತನ ಸಹೋದರ ತಿಳಿಸಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತನ್ನನ್ನು ಕೆಲಸದಿಂದ ತೆಗೆದು ಹಾಕಿದ ಕಾರಣಕ್ಕೆ ಈತ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ಕೃತ್ಯ ಎಸಗಿರಬಹುದು ಎನ್ನಲಾಗಿದೆ. ಆದರೆ, ಈ ದಾಳಿಗೆ ಕಾರಣವೇನು ಎಂಬ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.