ಸೋಮವಾರ, ಆಗಸ್ಟ್ 3, 2020
23 °C

ಹಂಪನಾಗೆ ಪಂಪ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಂಪನಾಗೆ ಪಂಪ ಪ್ರಶಸ್ತಿ

ಬೆಂಗಳೂರು: 2016ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಸಂಶೋಧಕ ಡಾ. ಹಂ.ಪ. ನಾಗರಾಜಯ್ಯ ಮತ್ತು ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಸಾಹಿತಿ ಶಾಂತಿ ನಾಯಕ ಅವರನ್ನು ಆಯ್ಕೆ ಮಾಡಲಾಗಿದೆ.

ಇತರೆ ಪ್ರಶಸ್ತಿಗಳಿಗೆ ಆಯ್ಕೆಯಾದವರ ವಿವರ:

ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ : ಹಸನ್‌ ನಯೀಂ ಸುರಕೋಡ

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ : ಡಾ. ಚೆನ್ನಣ್ಣ ವಾಲೀಕಾರ

ಸಂತ ಶಿಶುನಾಳ ಷರೀಫ ಪ್ರಶಸ್ತಿ : ವೈ.ಕೆ. ಮುದ್ದುಕೃಷ್ಣ

ನಿಜಗುಣ ಪುರಂದರ ಪ್ರಶಸ್ತಿ : ಗಣಪತಿ ಭಟ್‌ ಹಾಸಣಗಿ

ಕುಮಾರವ್ಯಾಸ ಪ್ರಶಸ್ತಿ : ಎನ್‌.ಆರ್‌. ಜ್ಞಾನಮೂರ್ತಿ

ಈ ಎಲ್ಲಾ ಪ್ರಶಸ್ತಿಗಳು ತಲಾ ₹ 3 ಲಕ್ಷ ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿರುತ್ತವೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.