ಜಗತ್ತಿನ ಕ್ರಿಯಾಶೀಲ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ

7

ಜಗತ್ತಿನ ಕ್ರಿಯಾಶೀಲ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ

Published:
Updated:
ಜಗತ್ತಿನ ಕ್ರಿಯಾಶೀಲ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ

ನವದೆಹಲಿ: ವಿಶ್ವದ ಕ್ರಿಯಾಶೀಲ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದಿದೆ.  ಜಿಎಲ್‍ಎಲ್ ಗ್ಲೋಬಲ್ ರಿಸರ್ಚ್ ಕಂಪನಿ ನಡೆಸಿದ ಸಮೀಕ್ಷೆಯ ಆಧಾರದಲ್ಲಿ ಈ ಪಟ್ಟಿಯನ್ನು ತಯಾರಿಸಲಾಗಿದೆ.

ಶಿಕ್ಷಣ, ಮೂಲಸೌಕರ್ಯ, ಅಗಾಧವಾಗಿ ಬೆಳೆಯುತ್ತಿರುವ ಜನಸಂಖ್ಯೆಗೆ ಹೊಂದಿಕೊಳ್ಳುವುದು ಸೇರಿದಂತೆ ದೇಶದ ಪ್ರಗತಿಗೆ ತಮ್ಮ ಕಾಣಿಕೆಯನ್ನೂ ನೀಡುತ್ತಿರುವ ವಿಚಾರಗಳನ್ನಾಧರಿಸಿ ಜಗತ್ತಿನ ಮೂವತ್ತು ನಗರಗಳನ್ನು ಗುರುತಿಸಲಾಗಿದೆ.

ಭಾರತದ ನಗರಗಳು ಸೇರಿದಂತೆ ಚೀನಾ, ವಿಯೆಟ್ನಾಂ ಮತ್ತು ಅಮೆರಿಕದ ಹಲವು ನಗರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

ಪ್ರಸ್ತುತ ಪಟ್ಟಿಯಲ್ಲಿ ಬೆಂಗಳೂರು ಅಗ್ರ ಸ್ಥಾನ ಪಡೆದಿದ್ದು,  ಭಾರತದ ಇತರ ನಗರಗಳಾದ  ಹೈದರಾಬಾದ್ ( 5ನೇ ಸ್ಥಾನ), ಪುಣೆ (13), ಚೆನ್ನೈ(18)  ದೆಹಲಿ (23) ಮತ್ತು ಮುಂಬೈ 25 ನೇ ಸ್ಥಾನದಲ್ಲಿದೆ.

ಈ ಪಟ್ಟಿಯಲ್ಲಿ ಟಾಪ್ 10 ಸ್ಥಾನದಲ್ಲಿರುವ ನಗರಗಳು

1. ಬೆಂಗಳೂರು

2. ಹೋ ಚಿ ಮಿನಾ ಸಿಟಿ

3.ಸಿಲಿಕಾನ್ ವ್ಯಾಲಿ

4. ಶಾಂಘೈ

5. ಹೈದ್ರಾಬಾದ್

6. ಲಂಡನ್

7. ಆಸ್ಟಿನ್

8. ಹನೋಯಿ

9. ಬೋಸ್ಟನ್

10. ನೈರೋಬಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry