ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ಗಂಟೆಗಳ ಕಾಲ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 3 ವರ್ಷದ ಮಗು  ರಕ್ಷಣೆ

Last Updated 2 ಫೆಬ್ರುವರಿ 2017, 11:38 IST
ಅಕ್ಷರ ಗಾತ್ರ

ಕಾನ್ಪುರ: ಇಲ್ಲಿನ ಜಜ್​ವಾವು ಪ್ರದೇಶದಲ್ಲಿ ಬುಧವಾರ ಕುಸಿದಿದ್ದ 6 ಮಹಡಿಗಳ ಕಟ್ಟಡದ ಅವಶೇಷಗಳ ಅಡಿಯಿಂದ 3 ವರ್ಷದ ಮಗುವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್) ತಂಡ ಗುರುವಾರ ರಕ್ಷಿಸಿದೆ.

ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮಗುವನ್ನು ಸುಮಾರು 15 ಗಂಟೆಗಳ ಬಳಿಕ ರಕ್ಷಿಸಲಾಗಿದೆ. ಮಗುವನ್ನು ತಂದೆಗೆ ಒಪ್ಪಿಸಲಾಯಿತು.
ಮಗು ಅವಶೇಷಗಳ ಅಡಿಯಲ್ಲಿ ನಿದ್ರಿಸುತ್ತಿತ್ತು. ಅದೃಷ್ಟವಶಾತ್‌ ಮಗುವಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಎನ್​ಡಿಆರ್​ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಅವಶೇಷಗಳ ಅಡಿಯಲ್ಲಿ ಗುರುವಾರ ಎರಡು ಶವ ಪತ್ತೆಯಾಗಿದ್ದು ಸಾವಿನ ಸಂಖ್ಯೆ 9ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT