ಭಾನುವಾರ, ಮೇ 29, 2022
31 °C

ಪಾಕ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ, 30 ಸಾವು, 100 ಜನರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಪಾಕ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ, 30 ಸಾವು, 100 ಜನರಿಗೆ ಗಾಯ

ಕರಾಚಿ: ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 30 ಜನ ಸಾವನ್ನಪ್ಪಿ, 100ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಸಿಂಧ್‌ ಪ್ರದೇಶದಲ್ಲಿರುವ ಸೆಹವಾನ್‌ ಪಟ್ಟಣದ ಸೂಫಿ ಶಹಬಾಜ್‌ ಕಲಂದರ್‌ ಪ್ರಾರ್ಥನಾ ಮಂದಿರದ ಬಳಿ ನಡೆದಿದೆ.ಒಂದು ವಾರದ ಅವಧಿಯೊಳಗೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಐದನೇ ಆತ್ಮಾಹುತಿ ಬಾಂಬ್‌ ದಾಳಿ ಇದಾಗಿದೆ. ಧಮಲ್‌–ಎ–ಸೂಫಿ ಎಂಬ ಧಾರ್ಮಿಕ ಕಾರ್ಯಕ್ರಮದಲ್ಲಿ ನೆರದಿದ್ದ ನೂರಾರು ಭಕ್ತಾದಿಗಳನ್ನು ಗುರಿಯಾಗಿಸಿಕೊಂಡು  ಬಾಂಬ್‌ ದಾಳಿ ನಡೆಸಲಾಗಿದೆ.30 ಮೃತದೇಹಗಳನ್ನು ಮತ್ತು ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಮೊಯಿನುದ್ದೀನ್‌ ಸಿದ್ದಿಕಿ ತಿಳಿಸಿದ್ದಾರೆ. ಸೆಹವಾನ್ ಪಟ್ಟಣದ ಸುತ್ತುಮುತ್ತಲಿನ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.‌ಪ್ರತಿ ಗುರುವಾರ ಭಕ್ತಾದಿಗಳು ಸಾಮೂಹಿಕವಾಗಿ ಪ್ರಾರ್ಥನೆ ನೆರವೇರಿಸಲು ಈ ಸ್ಥಳದಲ್ಲಿ ಜಮಾಯಿಸುತ್ತಿದ್ದರು. ಮಹಿಳೆಯರಿಗಾಗಿ ಮೀಸಲಿರಿಸುತ್ತಿದ್ದ ಸ್ಥಳದಲ್ಲಿ ಪ್ರಬಲ ಬಾಂಬ್‌ ಸ್ಫೋಟಿಸಿದೆ.ಸ್ಫೋಟ ನಡೆದ ಸ್ಥಳ ಪಾಕಿಸ್ತಾನ ಮತ್ತು ಅಫಘಾನಿಸ್ತಾನದ ಧಾರ್ಮಿಕ ಸೂಫಿ ಸಂತತಿಯ ಪ್ರಸಿದ್ಧ ತತ್ವಜ್ಞಾನಿ ಮತ್ತು ಕವಿ ಲಾಲ್‌ ಶಹಬಾಜ್‌ ಖಲಂದರ್‌ ಅವರಿಗೆ ಸೇರಿದೆ. ಸ್ಫೋಟದ ಹೊಣೆಯನ್ನು ಐಸಿಸ್‌ ಉಗ್ರ ಸಂಘಟನೆ ಹೊತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.