ಇಂಡಿಯಾ ಓಪನ್‌ ಬ್ಯಾಡ್ಮಿಂಟನ್: ಫೈನಲ್‌ಗೆ ಸಿಂಧು

7

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್: ಫೈನಲ್‌ಗೆ ಸಿಂಧು

Published:
Updated:
ಇಂಡಿಯಾ ಓಪನ್‌ ಬ್ಯಾಡ್ಮಿಂಟನ್: ಫೈನಲ್‌ಗೆ ಸಿಂಧು

ನವದೆಹಲಿ: ಚುರುಕಿನೊಂದಿಗೆ ಕುತೂಹಲದ ಆಟ ಪ್ರದರ್ಶಿಸಿದ ಭಾರತದ ಪಿ.ವಿ. ಸಿಂಧು ಅವರು ವಿಶ್ವದ ನಾಲ್ಕನೇ ಅಗ್ರ ಶ್ರೇಯಾಂಕಿತ ಆಟಗಾರ್ತಿ ಕೊರಿಯಾದ ಸಂಗ್‌ ಜಿ ಯುನ್‌ ಎದುರು ಗೆಲುವು ಸಾಧಿಸಿ ಫೈನಲ್‌ ಪ್ರವೇಶಿಸಿದರು. 

ಕಿಕ್ಕಿರಿದು ತುಂಬಿದ್ದ ಕ್ರಿಡಾಂಗಣದಲ್ಲಿ ನಡೆದ ಇಂಡಿಯಾ ಓಪನ್‌ ಸೂಪರ್‌ ಸರಣಿಯಲ್ಲಿ ಶನಿವಾರ ನಾಲ್ಕರ ಘಟ್ಟದ ಪಂದ್ಯದಲ್ಲಿ ಸಿಂಧು 21-18, 14-21, 21-14ರಿಂದ ಸಂಗ್‌ ಜಿ ಯುನ್‌ ಅವರನ್ನು ಮಣಿಸಿದರು.

ಶುಕ್ರವಾರ ನಡೆದ ಎಂಟರ ಘಟ್ಟದ ಪಂದ್ಯದಲ್ಲಿ ಸಿಂಧು ಅವರು 21-16, 22-20ರಿಂದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್‌ ಅವರ ಎದುರು ಜಯ ಗಳಿಸಿದ್ದರು.

ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಸಿಂಧು ಅವರು ಫೈನಲ್‌ನಲ್ಲಿ ಕ್ಯಾರೊಲಿನಾ ಮರಿನ್‌ ವಿರುದ್ಧ ಸೆಣಸಲಿದ್ದಾರೆ. ಪಂದ್ಯದ ವೀಕ್ಷಣೆಗೆ ಅಭಿಮಾನಿಗಳು ಕಾತರರಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry