ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕೊರಿಯಾಕ್ಕೆ ಸೋತ ಭಾರತ

Last Updated 3 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಪ್ಯಾಂಗ್‌ಯ್ಯಾಂಗ್‌: ತೀರಾ ಕಳಪೆ ಆಟವಾಡಿದ ಭಾರತ ಮಹಿಳಾ ತಂಡದವರು ಇಲ್ಲಿ ನಡೆದ ಎಎಫ್‌ಸಿ ಏಷ್ಯಾ ಕಪ್‌ ಅರ್ಹತಾ ಸುತ್ತಿನ ಫುಟ್‌ಬಾಲ್‌ ಪಂದ್ಯದಲ್ಲಿ 0–8 ಗೋಲು ಗಳಿಂದ ಉತ್ತರ ಕೊರಿಯಾ ಎದುರು ಹೀನಾಯವಾಗಿ ಸೋಲು ಕಂಡಿದ್ದಾರೆ.

ಈ ಗೆಲುವಿನ ಮೂಲಕ ಉತ್ತರ ಕೊರಿಯಾ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿತು. ಉಜ್ಬೇಕಿಸ್ತಾನ ಕೂಡ  ಮೂರು ಪಾಯಿಂಟ್ಸ್‌ ಹೊಂದಿದ್ದು ಗೋಲು ಗಳಿಕೆಯ ಆಧಾರದ ಮೇಲೆ ಎರಡನೇ ಸ್ಥಾನದಲ್ಲಿದೆ. 

‘ಬಿ’ ಗುಂಪಿನ ಪಂದ್ಯದಲ್ಲಿ ಉತ್ತರ ಕೊರಿಯಾದ ಆಟಗಾರ್ತಿಯರು  ಪೂರ್ಣವಾಗಿ ಪ್ರಾಬಲ್ಯ ಮೆರೆದರು. ಈ ತಂಡ ವಿಶ್ವ ರ್‍ಯಾಂಕ್‌ನಲ್ಲಿ ಹತ್ತನೇ ಸ್ಥಾನದಲ್ಲಿದೆ. ಆದ್ದರಿಂದ ಭಾರತಕ್ಕೆ ಕಠಿಣ ಸವಾಲು ಎದುರಾಗುವುದು ನಿರೀಕ್ಷಿತವೇ ಆಗಿತ್ತು. ಮುಂದಿನ ಪಂದ್ಯ ದಲ್ಲಿ ಭಾರತ ತಂಡ ದಕ್ಷಿಣ ಕೊರಿಯಾ ಎದುರು ಪೈಪೋಟಿ ನಡೆಸಲಿದೆ.

‘ಸಕಾರಾತ್ಮಕ ಮನೋಭಾವ ದೊಂದಿಗೆ ಇಲ್ಲಿಗೆ ಬಂದಿದ್ದೇವೆ. ಟೂರ್ನಿಯಲ್ಲಿ ಎದುರಾಗುವ ಫಲಿತಾಂಶಗಳನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇವೆ. ಹಿಂದಿನ ತಪ್ಪುಗಳಿಂದ ಪಾಠ ಕಲಿಯುತ್ತೇವೆ.

90 ನಿಮಿಷಗಳ ಆಟದಲ್ಲಿ ನಮ್ಮ ಆಟಗಾರ್ತಿಯರು ಉತ್ತಮ ಹೋರಾಟ ತೋರಿದರು. ಮುಂದಿನ ಪಂದ್ಯದಲ್ಲಿ ಇನ್ನಷ್ಟು ಚೆನ್ನಾಗಿ ಆಡುತ್ತೇವೆ’ ಎಂದು ಭಾರತ ತಂಡದ ಮುಖ್ಯ ಕೋಚ್ ಸಾಜಿದ್ ಯೂಸೂಫ್‌ ದಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT