ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22ರಂದು ಪ್ರಜಾವಾಣಿ, ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ

ಬ್ಯಾಟರಾಯನಪುರದಲ್ಲಿ ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌
Last Updated 10 ಏಪ್ರಿಲ್ 2017, 20:28 IST
ಅಕ್ಷರ ಗಾತ್ರ
ಬೆಂಗಳೂರು: ನೀವು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ನಿವಾಸಿಯೇ? ನೀವು ಓಡಾಡುವ ರಸ್ತೆಯಲ್ಲಿ ಗುಂಡಿ ಬಿದ್ದಿದೆಯೇ? ಜಲಮಂಡಳಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲವೆ? ಅಥವಾ ನಿತ್ಯ ವಾಯುವಿಹಾರಕ್ಕೆ ಹೋಗುವ ಉದ್ಯಾನ ಪಾಳುಬಿದ್ದಿದೆಯೇ?
 
ಹಾಗಾದರೆ, ಇದೇ 22ರಂದು ಬೆಳಿಗ್ಗೆ 10ಕ್ಕೆ ಸಹಕಾರನಗರದ 20ನೇ ಅಡ್ಡರಸ್ತೆಯಲ್ಲಿರುವ ಬಯಲು ರಂಗಮಂದಿರಕ್ಕೆ (ಬಲಮುರಿ ಗಣಪತಿ ದೇವಸ್ಥಾನದ ಹಿಂಭಾಗ) ಬನ್ನಿ.
 
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.
 
ಬ್ಯಾಟರಾಯನಪುರ ಕ್ಷೇತ್ರದ ಶಾಸಕರಾದ ಸಚಿವ ಕೃಷ್ಣ ಬೈರೇಗೌಡ, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
 
ಸಾರ್ವಜನಿಕರು ತಮ್ಮ ವಾರ್ಡ್‌ಗಳ  ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು.
 
ತನ್ಮೂಲಕ ವಾರ್ಡ್‌ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು. ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 22ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.
 
ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ. ಕುಂದುಕೊರತೆಗಳ ಬಗ್ಗೆ ಇ–ಮೇಲ್‌  janaspandana@ printersmysore.co.in ಕೂಡಾ ಮಾಡಬಹುದು. ಹೆಚ್ಚಿನ ಮಾಹಿತಿ ಗಾಗಿ: 9035562020 (ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಕರೆ ಮಾಡಬಹುದು).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT