ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದಲ್ಲಿ ನದಿ ಪ್ರಪಾತಕ್ಕೆ ಬಸ್‌ ಉರುಳಿ 44 ಮಂದಿ ಸಾವು

Last Updated 19 ಏಪ್ರಿಲ್ 2017, 8:55 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಟೋನ್ಸ್‌ ನದಿಯ ಪ್ರಪಾತಕ್ಕೆ ಬುಧವಾರ ಖಾಸಗಿ ಬಸ್‌ ಉರುಳಿ ಬಿದ್ದು ಕನಿಷ್ಠ 44 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಶಿಮ್ಲಾ ಜಿಲ್ಲೆಯ ನೆರ್ವಾ ಪ್ರದೇಶದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಬಸ್‌ನಲ್ಲಿ 56 ಮಂದಿ ಇದ್ದರೆಂದು ಹೇಳಲಾಗುತ್ತಿದೆ. 44 ಮಂದಿ ಮೃತಪಟ್ಟಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಬಸ್‌ ಉತ್ತರಾಖಂಡದ ಟಿಯುನಿ ಕಡೆಗೆ ಹೊರಟಿತ್ತು. ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ನದಿ ಪ್ರಪಾತಕ್ಕೆ ಬಿದ್ದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

‘ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್‌) ಎರಡು ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ತಂಡಗಳನ್ನು ಘಟನಾ ಸ್ಥಳಕ್ಕೆ ಕಳಿಸಲಾಗುವುದು’ ಎಂದು ಎಸ್‌ಡಿಆರ್‌ಎಫ್ ಕಮಾಂಡೆಂಟ್‌ ಜಗತ್‌ ರಾಮ್‌ ಜೋಶಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT