ದಾವಣಗೆರೆ: ಪಿಯು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಪಿಯು ಫಲಿತಾಂಶವು ಗುರುವಾರ ಮಧ್ಯಾಹ್ನ ಪ್ರಕಟವಾಯಿತು. ಜಿಲ್ಲೆಯಲ್ಲಿ ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
2017ನೇ ಸಾಲಿನ ಫಲಿತಾಂಶದ ಪ್ರಾಥಮಿಕ ಮಾಹಿತಿ ಮೇರೆಗೆ ಜಿಲ್ಲೆಗೆ 19ನೇ ಸ್ಥಾನ ದೊರೆತಿದೆ. ಒಟ್ಟು ಶೇ 55.17ರಷ್ಟು ಫಲಿತಾಂಶ ಬಂದಿದೆ. ಕಳೆದ ಸಾಲಿನಲ್ಲಿ ಜಿಲ್ಲೆ 21ನೇ ಸ್ಥಾನದಲ್ಲಿತ್ತು.
ಈ ಬಾರಿ ಎರಡು ಸ್ಥಾನ ಮೇಲೇರಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಆರ್.ವಿಜಯಾನಂದ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 22,926 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ದ್ದರು. ಇವರಲ್ಲಿ 11,212 ವಿದ್ಯಾರ್ಥಿ ಗಳು, 6,467 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.