ಗುರುವಾರ , ಸೆಪ್ಟೆಂಬರ್ 23, 2021
28 °C

ಶ್ರೀಲಂಕಾ ಪ್ರವಾಹ 100ಕ್ಕೂ ಹೆಚ್ಚು ಸಾವು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಶ್ರೀಲಂಕಾ ಪ್ರವಾಹ 100ಕ್ಕೂ ಹೆಚ್ಚು ಸಾವು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕೊಲಂಬೊ: ಶ್ರೀಲಂಕಾದಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆ ಹಾಗೂ ಭೂ ಕುಸಿತದಿಂದಾಗಿ 100ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.

ಶುಕ್ರವಾರ ಸಂಭವಿಸಿದ ಭೂಕುಸಿತದಲ್ಲಿ 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಪ್ರವಾಹದಲ್ಲಿ 500ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದ್ದು, 60 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ಶ್ರೀಲಂಕಾ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.‌

‘ಶ್ರೀಲಂಕಾದಲ್ಲಿ ಪ್ರವಾಹ ಹಾಗೂ ಭೂ ಕುಸಿತದಿಂದ ಆಪಾರ ಪ್ರಮಾಣದ ಆಸ್ತಿ ನಷ್ಟ ಹಾಗೂ ಜೀವ ಹಾನಿಯಾಗಿದೆ. ಇದಕ್ಕೆ ಭಾರತ ಸಂತಾಪ ವ್ಯಕ್ತಪಡಿಸುತ್ತದೆ. ಜತೆಗೆ, ನಾವು ಶ್ರೀಲಂಕಾದ ಸಹೋದರ– ಸಹೋದರಿಯರ ನೆರವಿಗೆ ಕೂಡಲೇ ಧಾವಿಸುತ್ತೇವೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗಾಗಿ ಭಾರತ ಸರ್ಕಾರ ನೌಕಾ ಪಡೆ ಹಾಗೂ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ನೌಕಾಪಡೆ ಈಗಾಗಲೇ ಶ್ರೀಲಂಕಾದತ್ತ ಹೊರಟ್ಟಿದ್ದು, ಭಾನುವಾರ ಕೊಲಂಬೋ ತಲುಪುವ ಸಾಧ್ಯತೆಗಳಿವೆ. ನೌಕಾ ಪಡೆಯೊಂದಿಗೆ ವೈದ್ಯಕೀಯ ಸಾಮಾಗ್ರಿಗಳು, ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್‌ ವ್ಯವಸ್ಥೆ ಕಳುಹಿಸಿಕೊಂಡಲಾಗಿದೆ ಎಂದು ಭಾರತೀಯ ನೌಕಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.