ಸೊಪುರ ಎನ್‌ಕೌಂಟರ್‌: ಇಬ್ಬರು ಉಗ್ರರು ಬಲಿ

7

ಸೊಪುರ ಎನ್‌ಕೌಂಟರ್‌: ಇಬ್ಬರು ಉಗ್ರರು ಬಲಿ

Published:
Updated:
ಸೊಪುರ ಎನ್‌ಕೌಂಟರ್‌: ಇಬ್ಬರು ಉಗ್ರರು ಬಲಿ

ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪುರದ ಮನೆಯೊಂದರಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ.

ಈ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆ ಅಧಿಕಾರಿಗಳು ತಿಳಿಸಿದ್ದಾರೆ.

ನಟಿಪುರ ವಲಯದ ಸೊಪುರದಲ್ಲಿ ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಬಳಿಕ, ಬೆಳಗಿನಜಾವ 3.30ರ ಸುಮಾರಿಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರಿಗಾಗಿ ಶೋಧ ನಡೆಸುತ್ತಿದ್ದ ವೇಳೆ, ಉಗ್ರರು ಭದ್ರತಾ ಪಡೆಯತ್ತ ಗುಂಡು ಹಾರಿಸಿದ್ದಾರೆ. ಬಳಿಕ, ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರಿದ ಭದ್ರತಾ ಪಡೆ, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry