ಗೃಹ ಸಚಿವ ಸ್ಥಾನಕ್ಕೆ ಜಿ. ಪರಮೇಶ್ವರ್‌ ರಾಜೀನಾಮೆ

7

ಗೃಹ ಸಚಿವ ಸ್ಥಾನಕ್ಕೆ ಜಿ. ಪರಮೇಶ್ವರ್‌ ರಾಜೀನಾಮೆ

Published:
Updated:
ಗೃಹ ಸಚಿವ ಸ್ಥಾನಕ್ಕೆ ಜಿ. ಪರಮೇಶ್ವರ್‌ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದ ಬೆನ್ನಲ್ಲೇ ಡಾ.ಜಿ. ಪರಮೇಶ್ವರ್‌ ಅವರು ಗೃಹ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿದರು.

ಪರಮೇಶ್ವರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸಿದರು.

ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಎದುರಿಸಲು ನಿರ್ಧರಿಸಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ), ಜಿ.ಪರಮೇಶ್ವರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಿ ಬುಧವಾರ ಅಧಿಕೃತ ಆದೇಶ ಹೊರಡಿಸಿತ್ತು.

ಪಕ್ಷದ ಹೈಕಮಾಂಡ್‌ ಆದೇಶದಂತೆ ಪರಮೇಶ್ವರ್‌ ಅವರು ಇಂದು ರಾಜೀನಾಮೆ ಸಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry