ಅನುರಾಗ್‌ ತಿವಾರಿ ಸಾವು ಪ್ರಕರಣ: ಎಸ್‌ಐಟಿಯಿಂದ ಬೆಂಗಳೂರಿನಲ್ಲಿ ದಾಖಲೆ ಪರಿಶೀಲನೆ

7

ಅನುರಾಗ್‌ ತಿವಾರಿ ಸಾವು ಪ್ರಕರಣ: ಎಸ್‌ಐಟಿಯಿಂದ ಬೆಂಗಳೂರಿನಲ್ಲಿ ದಾಖಲೆ ಪರಿಶೀಲನೆ

Published:
Updated:
ಅನುರಾಗ್‌ ತಿವಾರಿ ಸಾವು ಪ್ರಕರಣ: ಎಸ್‌ಐಟಿಯಿಂದ ಬೆಂಗಳೂರಿನಲ್ಲಿ ದಾಖಲೆ ಪರಿಶೀಲನೆ

ಬೆಂಗಳೂರು: ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಗುರುವಾರ ಬೆಂಗಳೂರಿನ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದಾರೆ.‘ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ₹ 2,000 ಕೋಟಿ ಹಗರಣವನ್ನು ಬಯಲಿಗೆಳೆಯಲು ಮುಂದಾದುದೇ ಅನುರಾಗ್‌ ಸಾವಿಗೆ ಕಾರಣ’ ಎಂದು ಅವರ ಸಹೋದರ ಮಯಾಂಕ್‌ ತಿವಾರಿ ಆರೋಪಿಸಿದ್ದರು.

ಹೀಗಾಗಿ ಎಸ್‌ಐಟಿ ಅಧಿಕಾರಿಗಳು ರಾಜ್ಯದ ಆಯುಕ್ತರ ಕಚೇರಿಯ ಸಿಬ್ಬಂದಿಯನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಕಚೇರಿಗೆ ಭೇಟಿ ನೀಡಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದ ಅನುರಾಗ್‌ ಅವರು ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಆಯುಕ್ತರಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry