6 ನೇ ವೇತನ ಆಯೋಗಕ್ಕೆ ಶ್ರೀನಿವಾಸಮೂರ್ತಿ ಅಧ್ಯಕ್ಷ

7

6 ನೇ ವೇತನ ಆಯೋಗಕ್ಕೆ ಶ್ರೀನಿವಾಸಮೂರ್ತಿ ಅಧ್ಯಕ್ಷ

Published:
Updated:
6 ನೇ ವೇತನ ಆಯೋಗಕ್ಕೆ ಶ್ರೀನಿವಾಸಮೂರ್ತಿ ಅಧ್ಯಕ್ಷ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್‌. ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯಲ್ಲಿ ಆರನೇ ವೇತನ ಆಯೋಗ ರಚಿಸಲಾಗಿದೆ.

ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತರಾಗಿರುವ  ಶ್ರೀನಿವಾಸಮೂರ್ತಿ,ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ (ಕೆಇಆರ್‌ಸಿ) ಅಧ್ಯಕ್ಷರಾಗಿಯೂ ಕೆಲಸ

ಮಾಡಿದ್ದಾರೆ.

ಆಯೋಗದ ಸದಸ್ಯರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಎಂ.ಡಿ. ಸನಾವುಲ್ಲಾ, ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿಯಂತ್ರಕ ಆರ್‌.ಎಸ್‌. ಫೋಂಡೆ, ಕಾರ್ಯದರ್ಶಿಯಾಗಿ ಅಬಕಾರಿ ಇಲಾಖೆ ಆಯುಕ್ತ ಎಂ. ಮಂಜುನಾಥ್‌ ನಾಯ್ಕ್‌ ಅವರನ್ನು ಸರ್ಕಾರ ನೇಮಕ ಮಾಡಿದೆ.

ನಾಲ್ಕು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಸೂಚಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದ ಮಧ್ಯೆ ದೊಡ್ಡ ಮಟ್ಟದ ಅಂತರ ಇರುವ ಕುರಿತು ಆಯೋಗವು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದರೆ ಮಾತ್ರ ನೌಕರರಿಗೆ ಮಧ್ಯಂತರ ಪರಿಹಾರ ಸಿಗುವ ಸಂಭವ ಇದೆ.

ಕೇಂದ್ರ ಸರ್ಕಾರ ಏಳನೇ ವೇತನ ಆಯೋಗ ಅನುಷ್ಠಾನ ಮಾಡಿದ ಬಳಿಕ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಬೇಕು ಎಂಬ ಬೇಡಿಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್‌ನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ವೇತನ ಆಯೋಗ ರಚಿಸುವುದಾಗಿ ಘೋಷಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry