ಯಾವುದೇ ಕ್ಷೇತ್ರದಿಂದಲೂ ಸ್ಪರ್ಧೆ: ಡಾ.ಪರಮೇಶ್ವರ್

7

ಯಾವುದೇ ಕ್ಷೇತ್ರದಿಂದಲೂ ಸ್ಪರ್ಧೆ: ಡಾ.ಪರಮೇಶ್ವರ್

Published:
Updated:
ಯಾವುದೇ ಕ್ಷೇತ್ರದಿಂದಲೂ ಸ್ಪರ್ಧೆ: ಡಾ.ಪರಮೇಶ್ವರ್

ತುಮಕೂರು: ಹೈಕಮಾಂಡ್ ಸೂಚಿಸಿದರೆ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಶುಕ್ರವಾರ ಹೇಳಿದ್ದಾರೆ.

ಇಲ್ಲಿನ ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮೀಸಲು ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದೇನೂ ಇಲ್ಲ. ಯಾವುದೇ ಕ್ಷೇತ್ರದಿಂದಲಾದರೂ ಸ್ಪರ್ಧಿಸುತ್ತೇನೆ ಜಿ.ಪರಮೇಶ್ವರ್ ಹೇಳಿದರು.

ಮುಂದಿನ ಚುನಾವಣೆಯಲ್ಲಿ ಇಷ್ಟೇ ಸ್ಥಾನ ಗೆಲ್ಲುತ್ತೇವೆ ಎಂದು ಬೇರೆ ಪಕ್ಷದವರ ಹಾಗೆ ಹೇಳುವುದಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ. ಪಕ್ಷದ ಹೈಕಮಾಂಡ್ ಕೂಡಾ ಈ ವಿಷಯದಲ್ಲಿ ಈಗಾಗಲೆ ಸ್ಪಷ್ಟಪಡಿಸಿದೆ ಎಂದರು.

ಮಾತನಾಡುವ ಮುನ್ನ ಎಚ್ಚರಿಕೆ ಇರಲಿ: ಜಾರ್ಜ್ ಅವರಿಗೆ ಗೃಹ ಖಾತೆ ವಹಿಸಿದರೆ ಹೋರಾಟ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿರುವುದು ಸರಿಯಲ್ಲ. ಈ ರೀತಿ ಮಾತನಾಡುವ ಮುನ್ನ ಎಚ್ಚರಿಕೆ ಇರಬೇಕಾಗುತ್ತದೆ ಎಂದರು. ಈ ವೇಳೆ  ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry