ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಯ ಪಾಲನೆ: ಕೋರ್ಟ್‌ ಸಿಬ್ಬಂದಿಗೆ ಸೂಚನೆ

Last Updated 2 ಜೂನ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರತಿದಿನ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಕೆಲಸಕ್ಕೆ ಬನ್ನಿ. ಸಂಜೆ 5 ಗಂಟೆವರೆಗೆ ಇಲ್ಲವೇ ನ್ಯಾಯಾಲಯದ ಕಲಾಪ ಮುಗಿಯುವವರೆಗೆ ಇರಿ’ –ಹೀಗೆಂದು ಸಾಕೇತ್‌ ಜಿಲ್ಲಾ ನ್ಯಾಯಾಧೀಶರು ತಮ್ಮ ಸಿಬ್ಬಂದಿಗೆ  ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶೀಘ್ರಲಿಪಿಗಾರ್ತಿಯೊಬ್ಬರು ಕಲಾಪದ ಮಧ್ಯದಲ್ಲಿಯೇ ಎದ್ದುಹೋಗಿ ಅವಾಂತರ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಈ ನಿರ್ದೇಶನ ಹೊರಬಿದ್ದಿದೆ.

ತೀಸ್‌ ಹಜಾರಿಯ ವಿಶೇಷ ನ್ಯಾಯಾಲಯದಲ್ಲಿ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಾಕ್ಷಿಗಳ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತಿತ್ತು.  ಈ ವೇಳೆ ಶೀಘ್ರಲಿಪಿಗಾರ್ತಿ ತಮ್ಮ ಕ್ಯಾಬ್‌ಗೆ ತಡವಾಗುತ್ತದೆಂದು ಹೇಳಿ ಕರ್ತವ್ಯವನ್ನು ಅರ್ಧದಲ್ಲೇ ಬಿಟ್ಟು ತೆರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT