ಬಾಲಸೋರ್ (ಒಡಿಶಾ) : ಸ್ವದೇಶಿ ನಿರ್ಮಿತ ಪೃಥ್ವಿ– 2 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯನ್ನು ಶುಕ್ರವಾರ ಇಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ನೆಲದಿಂದ ನೆಲಕ್ಕೆ ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯದ ಕ್ಷಿಪಣಿಯನ್ನು ಬೆಳಿಗ್ಗೆ 9.50ಕ್ಕೆ ಚಾಂಡಿಪುರದ ಸಮಗ್ರ ಪರೀಕ್ಷಾ ವಲಯದಲ್ಲಿರುವ (ಐಟಿಆರ್) ಉಡಾ ವಣಾ ಸಂಕೀರ್ಣ 3ರಿಂದ ಪರೀಕ್ಷೆಗೆ ಒಳಪಡಿಸಲಾಯಿತು.