ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್‌: ಈ ವರ್ಷ 20 ಸಾವಿರ ಉದ್ಯೋಗ

Last Updated 2 ಜೂನ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ:  ಪ್ರಸಕ್ತ ವರ್ಷ 20 ಸಾವಿರ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಇನ್ಫೊಸಿಸ್‌ ಹೇಳಿದೆ.
ಭಾರಿ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎನ್ನುವ ವರದಿಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿರುವ ಇನ್ಫೊಸಿಸ್‌ ಸಿಒಒ ಯು.ಬಿ. ಪ್ರವೀಣ್‌ ರಾವ್‌ ಅವರು, ‘ಈ ವರದಿಗಳು ಉತ್ಪ್ರೇಕ್ಷೆಯಿಂದ ಕೂಡಿವೆ’ ಎಂದು ಹೇಳಿದ್ದಾರೆ.

ಕಳಪೆ ಸಾಧನೆ ಆಧಾರದ ಮೇಲೆ ಕೇವಲ 400 ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಇನ್ಫೊಸಿಸ್‌ ಸಹ ಅಧ್ಯಕ್ಷ ರವಿ ವೆಂಕಟೇಶನ್‌ ಅವರೊಂದಿಗೆ ಶುಕ್ರವಾರ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್‌ ಅವರನ್ನು ಭೇಟಿ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಉದ್ಯೋಗ ಸೃಷ್ಟಿಸುವಲ್ಲಿ ಇನ್ಫೊಸಿಸ್‌ ಮುಂಚೂಣಿಯಲ್ಲಿದೆ. ಕಾರ್ಯಕ್ಷಮತೆ ಆಧಾರದ ಮೇಲೆ ಕೆಲವರನ್ನು ಕೆಲಸದಿಂದ ತೆಗೆಯುವುದನ್ನೇ  ದೊಡ್ಡ ವಿಷಯವನ್ನಾಗಿ ಬಿಂಬಿಸುವುದು ಬೇಡ’ ಎಂದು  ಮನವಿ ಮಾಡಿದ್ದಾರೆ.

‘ಕಳೆದ ವರ್ಷ ಕೂಡ ಕಂಪೆನಿ 20,000 ಸಿಬ್ಬಂದಿ ನೇಮಕ ಮಾಡಿಕೊಂಡಿತ್ತು. ಅಷ್ಟೇ ಸಂಖ್ಯೆಯ ಸಿಬ್ಬಂದಿಯನ್ನು ಈ ವರ್ಷವೂ ನೇಮಕ ಮಾಡಿಕೊಳ್ಳಲಾಗುವುದು. ಮೊದಲ 6 ತಿಂಗಳಲ್ಲಿ ಹತ್ತು ಸಾವಿರ ಜನರಿಗೆ ಉದ್ಯೋಗ ನೀಡಲಾಗುವುದು’ ಎಂದು ರಾವ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT