ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಗುಂಡಿನ ದಾಳಿ

7

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಗುಂಡಿನ ದಾಳಿ

Published:
Updated:
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಗುಂಡಿನ ದಾಳಿ

ಜಮ್ಮು: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯ ನಾಗರಿಕ ವಸತಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿದೆ.

ಪೂಂಚ್‌ ಜಿಲ್ಲೆ ವ್ಯಾಪ್ತಿಯ ಗಡಿ ನಿಯಂತ್ರಣ ರೇಖೆಯಲ್ಲಿನ ಸೇನಾ ನೆಲೆಗಳು ಹಾಗೂ ನಾಗರಿಕ ವಸತಿಗಳ ಮೇಲೆ ಪಾಕ್‌ ಸೇನೆ ಗುಂಡಿನ ದಾಳಿ ನಡೆಸಿದೆ.

ಪಾಕಿಸ್ತಾನ ಸೇನೆ ಶುಕ್ರವಾರ ರಾತ್ರಿ 11ರ ಸುಮಾರಿಗೆ ಅಪ್ರಚೋದಿತ ದಾಳಿ ನಡೆಸಿದ್ದು, ಸಣ್ಣ ಪ್ರಮಾಣದ ಷೆಲ್‌ ಹಾಗೂ 82 ಎಂಎಂ ಮತ್ತು 120 ಎಂಎಂ ಪಿರಂಗಿಗಳನ್ನು ಸಿಡಿಸಿದೆ ಎಂದು ಸೇನೆಯ ವಕ್ತಾರರು ಶನಿವಾರ ತಿಳಿಸಿದ್ದಾರೆ.

ಭಾರತೀಯ ಸೇನೆ ದಾಳಿಗೆ ಪ್ರತಿದಾಳಿ ನಡೆಸಿ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry