ಸೇನಾ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ: ಇಬ್ಬರು ಯೋಧರು ಸಾವು, ನಾಲ್ವರು ಗಾಯ

7

ಸೇನಾ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ: ಇಬ್ಬರು ಯೋಧರು ಸಾವು, ನಾಲ್ವರು ಗಾಯ

Published:
Updated:
ಸೇನಾ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ: ಇಬ್ಬರು ಯೋಧರು ಸಾವು, ನಾಲ್ವರು ಗಾಯ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಶನಿವಾರ ಉಗ್ರರು ಸೇನಾ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ಇಬ್ಬರು ಯೋಧರು ಮೃತಪಟ್ಟಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದಾರೆ.

ಕುಲ್ಗಾಮ್‌ ಜಿಲ್ಲೆಯ ಲೋನ ಮುಂಡಾದ ಬಳಿಯ ಕ್ವಾಜಿಗುಂಡ ಪ್ರದೇಶದಲ್ಲಿ ಉಗ್ರರು ಸೇನಾ ಬೆಂಗಾವಲು ಪಡೆಯ ಮೇಲೆ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಸಾವಿಗೀಡಾಗಿದ್ದು, ಇತರ ನಾಲ್ವ‌ರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಪಡೆ ಮೂಲಗಳು ತಿಳಿಸಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ಭೇಟೆಗಾಗಿ ಸೇನೆ ಶೋಧ ನಡೆಸಿದೆ.

ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಲೋನ ಮುಂಡ ಶ್ರೀನಗರದಿಂದ 100 ಕಿ.ಮೀ. ದೂರದಲ್ಲಿದೆ. ಘಟನೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry