ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಉದ್ದದ ಸೇತುವೆ ಮೇಲೆ ಚೀನಾದ ಬೆದರಿಕೆಯ ಕರಿನೆರಳು?

Last Updated 3 ಜೂನ್ 2017, 10:55 IST
ಅಕ್ಷರ ಗಾತ್ರ

ಗುವಾಹಟಿ: ಇತ್ತೀಚೆಗೆ ಉದ್ಘಾಟನೆಗೊಂಡ ದೇಶದ ಉದ್ದದ ‘ಭೂಪೇನ್‌ ಹಜಾರಿಕಾ ಸೇತುವೆ’ ಮೇಲೆ ಚೀನಾದ ಬೆದರಿಕೆಯ ಕರಿನೆರಳು ಆವರಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಸೇತುವೆಗೆ ಬೆದರಿಕೆ ಇರುವ ವಿಷಯವನ್ನು ಅಸ್ಸಾಂ ಪೊಲೀಸ್‌ನ ಹೆಚ್ಚುವರಿ ಮಹಾನಿರ್ದೇಶಕ ಪಲ್ಲಬ್‌ ಭಟ್ಟಾಚಾರ್ಯ ಖಚಿತಪಡಿಸಿದ್ದಾರೆ.

‘ಸೇತುವೆಗೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ವಿಭಾಗದಿಂದ ಮಾಹಿತಿ ಸಿಕ್ಕಿದೆ. ಹೀಗಾಗಿ ಸೇತುವೆಗೆ ಹೆಚ್ಚಿನ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಭಟ್ಟಾಚಾರ್ಯ ತಿಳಿಸಿದ್ದಾರೆ.

ಸೇತುವೆಯ ಭದ್ರತೆಯ ಹೊಣೆಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್‌ಎಫ್‌) ವಹಿಸುವ ಬಗ್ಗೆ ಅಸ್ಸಾಂ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ನಿರ್ಮಿಸಿರುವ ಅತಿ ಉದ್ದದ ಸೇತುವೆ ಇದಾಗಿದೆ. 9.3 ಕಿ.ಮೀ. ಉದ್ದದ ಈ ಸೇತುವೆ ಅರುಣಾಚಲ ಪ್ರದೇಶದ ಧೋಲಾ ಮತ್ತು ಅಸ್ಸಾಂನ ಸಾಧಿಯಾಗೆ ಸಂಪರ್ಕ ಕಲ್ಪಿಸುತ್ತದೆ.

ಮೇ 26ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದರು. ಅಸ್ಸಾಂನ ಹಿರಿಯ ಗಾಯಕ ಭೂಪೇನ್‌ ಹಜಾರಿಕಾ ಅವರ ಹೆಸರನ್ನು ಸೇತುವೆಗೆ ಇಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT