ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರ್ಜ್‌ನಲ್ಲಿ ಸಿಲುಕಿದ್ದ ಎಲ್ಲರ ರಕ್ಷಣೆ

Last Updated 4 ಜೂನ್ 2017, 5:51 IST
ಅಕ್ಷರ ಗಾತ್ರ

ಮಂಗಳೂರು: ಉಳ್ಳಾಲದ ಅಳಿವೆಯಲ್ಲಿ ಅಪಘಾತಕ್ಕೀಡಾಗಿರುವ ಬೃಹತ್‌ ಬಾರ್ಜ್‌ನಲ್ಲಿ ಸಿಲುಕಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ. ಶನಿವಾರ ಸಂಜೆ ಬಾರ್ಜ್‌ ಅಪಘಾತಕ್ಕೀಡಾಗಿತ್ತು. ಶನಿವಾರ ಕಾರ್ಯಾಚರಣೆ ನಡೆಸಿದ್ದ ರಕ್ಷಣಾ ತಂಡ ಅಪಾಯಕ್ಕೆ ಸಿಲುಕಿರುವ ಅದರಲ್ಲಿದ್ದ 27 ಮಂದಿ ಪೈಕಿ 4 ಮಂದಿಯನ್ನು ರಕ್ಷಿಸಿದ್ದರು.

ಉಳಿದ 23 ಮಂದಿಯನ್ನು ರಕ್ಷಿಸಲು ಸಾಧ್ಯವಾಗಿರಲಿಲ್ಲ. ಭಾನುವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು.ಆದರೆ, ಭಾರೀ ಗಾಳಿ ಮತ್ತು ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಳಿತಗೊಳಿಸಲಾಗಿತ್ತು. ಭಾರೀ ಗಾಳಿ, ಮಳೆಯ ನಡುವೆಯೇ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡದ ಸಿಬ್ಬಂದಿ ಬಾರ್ಜ್‌ನಲ್ಲಿ ಸಿಲುಕಿದ್ದ 23 ಮಂದಿಯನ್ನು ರಕ್ಷಿಸಿದ್ದಾರೆ.

ಕೋಸ್ಟ್ ಗಾರ್ಡ್ ಹೋವರ್ ಕ್ರಾಫ್ಟ್ ಎಸಿವಿ ಎಚ್-196 ಮತ್ತು ಅಮರ್ತ್ಯಾ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಲಾಯಿತು.

ಭಾರೀ ಗಾಳಿ, ಮಳೆಯಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿತ್ತು. ಇದರಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿತ್ತು.

‘ಬಾರ್ಜ್‌ನಲ್ಲಿ ಸೂಕ್ತ ಸುರಕ್ಷತಾ ವ್ಯವಸ್ಥೆ ಇಲ್ಲದಿದ್ದ ಕಾರಣಕ್ಕೆ ದರ್ಥಿ ಇನ್ಪಾಸ್ಟ್ರಕ್ಚರ್ ಕಂಪೆನಿ ವಿರುದ್ಧ  ಕ್ರಮ ತೆಗೆದುಕೊಳ್ಳಲು ಬಂದರು ಇಲಾಖೆಗೆ ಸೂಚನೆ ನೀಡಲಾಗಿದೆ’ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT