ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷರಾದವರು ಮುಖ್ಯಮಂತ್ರಿಯಾಗಬೇಕು ಎಂಬುದು ನಿಯಮಾವಳಿಯಲ್ಲ: ಡಾ. ಜಿ. ಪರಮೇಶ್ವರ್‌

Last Updated 4 ಜೂನ್ 2017, 8:30 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷರಾದವರು ಮುಖ್ಯಮಂತ್ರಿಯಾಗಬೇಕು ಎಂಬುದು ನಿಯಮಾವಳಿಯಲ್ಲ. ಅದು ಕೇವಲ ಸಂಪ್ರದಾಯ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ಪ್ರೆಸ್‌ಕ್ಲಬ್‌ನಲ್ಲಿ ಭಾನುವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದಲಿತ ಮುಖ್ಯಮಂತ್ರಿ ಕೂಗು ಈಗ ಅಪ್ರಸ್ತುತ. ನಾನು ದಲಿತ ಸಮುದಾಯದಲ್ಲಿ ಜನಿಸಿರುವುದು ಕೇವಲ ಆಕಸ್ಮಿಕ. ನಾನೇನು ಅರ್ಜಿ ಹಾಕಿ ಆ ಸಮುದಾಯದಲ್ಲಿ ಹುಟ್ಟಿಲ್ಲ. ನನ್ನನ್ನು ಯಾಕೆ ಹಾಗೆ ದಲಿತ ಮುಖ್ಯಮಂತ್ರಿ ಪಟ್ಟಕ್ಕೆ ಪರಿಗಣಿಸಿದ್ದಾರೋ ಗೊತ್ತಿಲ್ಲ. ಅಲ್ಲದೆ ಚುನಾವಣೆ ಮುಗಿದು, ಶಾಸಕಾಂಗ ಪಕ್ಷ ಆಯ್ಕೆ ಮಾಡಿದ ಮೇಲೆ ಮುಖ್ಯಮಂತ್ರಿಯಾಗುವ ಮಾತು’ ಎಂದರು.

‘ಒಬ್ಬರನ್ನೇ ಮೂರನೇ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ‌ ಮುಂದುವರಿಸಿರುವುದು ದಾಖಲೆಯೂ ಹೌದು. ಇದು ಕಾಂಗ್ರೆಸ್ ಹೈ ಕಮಾಂಡ್ ನನಗೆ ಕೊಟ್ಟಿರುವ ಅತ್ಯುನ್ನತ ಗೌರವ. ಹೀಗಾಗಿ ಈ ಹೊಣೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ’ ಎಂದಿದ್ದಾರೆ.

‘ರಾಷ್ಟ್ರದಲ್ಲಿ ಕಾಂಗ್ರೆಸ್ ಅಡಿಪಾಯ ಕಳೆದುಕೊಳ್ಳುತ್ತಿದೆ, ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಉಳಿದಿದೆ ಎಂಬ ಆರೋಪ ಇದೆ. ಆದರೆ, ಕಾಂಗ್ರೆಸ್‌ನ ಶೇಕಡಾವಾರು ಮತಗಳಿಕೆ ಪ್ರಮಾಣ ಕಡಿಮೆಯಾಗಿಲ್ಲ. ಹೀಗಾಗಿ ಬಿಜೆಪಿಯವರ ಕಾಂಗ್ರೆಸ್ ಮುಕ್ತ ಭಾರತ ಕನಸು ಸಾಕಾರವಾಗುವುದಿಲ್ಲ’ ಎಂದರು.

‘ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ‌ ಮನ್ನಾ ಮಾಡುವವರೆಗೂ ರಾಜ್ಯದಲ್ಲಿ ಸಹಕಾರ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡುವುದಿಲ್ಲ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT