ಉತ್ತಮ ಮಳೆಗಾಗಿ ಕಾವೇರಿ ನೀರಾವರಿ ನಿಗಮದಿಂದ ತಲಕಾವೇರಿಯಲ್ಲಿ ಪರ್ಜನ್ಯ ಜಪ

7
ಕಾವೇರಿಗೆ ಬಾಗಿನ ಅರ್ಪಣೆ

ಉತ್ತಮ ಮಳೆಗಾಗಿ ಕಾವೇರಿ ನೀರಾವರಿ ನಿಗಮದಿಂದ ತಲಕಾವೇರಿಯಲ್ಲಿ ಪರ್ಜನ್ಯ ಜಪ

Published:
Updated:
ಉತ್ತಮ ಮಳೆಗಾಗಿ ಕಾವೇರಿ ನೀರಾವರಿ ನಿಗಮದಿಂದ ತಲಕಾವೇರಿಯಲ್ಲಿ ಪರ್ಜನ್ಯ ಜಪ

ಮಡಿಕೇರಿ: ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಮೃದ್ಧಿ ನೆಲೆಸಲಿ ಎಂದು ಕಾವೇರಿ ನೀರಾವರಿ ನಿಗಮದ ವತಿಯಿಂದ ಕಾವೇರಿ ಉಗಮ ಸ್ಥಳ ತಲಕಾವೇರಿಯಲ್ಲಿ ಭಾನುವಾರ ಪರ್ಜನ್ಯ ಜಪ ನಡೆಯಿತು.

ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಜಪವು ನಡೆಯಿತು. ಈ ಸಂದರ್ಭದಲ್ಲಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ವಿಜಯಕುಮಾರ್ ದಂಪತಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಮಧ್ಯಾಹ್ನ 3 ಗಂಟೆಗೆ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಹಾಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry