ಬಂಡವಾಳ ಸಂಗ್ರಹಕ್ಕೆ ಮುಂದಾದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು

7

ಬಂಡವಾಳ ಸಂಗ್ರಹಕ್ಕೆ ಮುಂದಾದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು

Published:
Updated:
ಬಂಡವಾಳ ಸಂಗ್ರಹಕ್ಕೆ ಮುಂದಾದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಮಾರುಕಟ್ಟೆಯಿಂದ ₹58 ಸಾವಿರ ಕೋಟಿ  ಬಂಡವಾಳ ಸಂಗ್ರಹಿಸುವ ನಿರೀಕ್ಷೆ ಇಟ್ಟುಕೊಂಡಿವೆ.

ಮುಖ್ಯವಾಗಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ), ಬ್ಯಾಂಕ್‌ ಆಫ್‌ ಬರೋಡಾ ಮತ್ತು ಐಡಿಬಿಐ ಬ್ಯಾಂಕ್ ಬಂಡವಾಳ ಸಂಗ್ರಹಕ್ಕೆ ಯೋಜನೆ ರೂಪಿಸಿವೆ.ಅಂತರರಾಷ್ಟ್ರೀಯ ಬ್ಯಾಂಕಿಂಗ್ ಮಾನದಂಡವಾದ ‘ಬಾಸೆಲ್‌–3’ ನಿಯಮ ಅಳವಡಿಸಿಕೊಳ್ಳಲು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ 2019ರ ಒಳಗೆ ಒಟ್ಟು ₹1.80 ಲಕ್ಷ ಕೋಟಿ ಬಂಡವಾಳದ ಅಗತ್ಯವಿದೆ.

ಇದರಲ್ಲಿ ಕೇಂದ್ರ ಸರ್ಕಾರ 2018–19ರ ಒಳಗೆ ಒಟ್ಟು ₹70 ಸಾವಿರ ಕೋಟಿ ನೀಡಲಿದೆ. ಇನ್ನುಳಿದ ₹1.10 ಲಕ್ಷ ಕೋಟಿಯನ್ನು ಮಾರುಕಟ್ಟೆಯಿಂದ ಸಂಗ್ರಹಿಸುವುದು ಅನಿವಾರ್ಯವಾಗಿದೆ.   ವಸೂಲಿಯಾಗದ ಸಾಲ ಗರಿಷ್ಠ ಮಟ್ಟದಲ್ಲಿದೆ. ಹೀಗಾಗಿ ಮಾರುಕಟ್ಟೆಯಿಂದ ಬಂಡವಾಳ ಸಂಗ್ರಹಿಸುವುದು ಬಹಳ ಕಷ್ಟವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry