ತರಂಗಾ ಮೇಲೆ ಎರಡು ಪಂದ್ಯಗಳ ನಿಷೇಧ

7

ತರಂಗಾ ಮೇಲೆ ಎರಡು ಪಂದ್ಯಗಳ ನಿಷೇಧ

Published:
Updated:
ತರಂಗಾ ಮೇಲೆ ಎರಡು ಪಂದ್ಯಗಳ ನಿಷೇಧ

ಲಂಡನ್‌: ದಕ್ಷಿಣ ಆಫ್ರಿಕಾ ವಿರುದ್ಧದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದ ವೇಳೆ ತಮ್ಮ ಪಾಲಿನ 50 ಓವರ್‌ಗಳನ್ನು ಪೂರ್ಣಗೊಳಿಸಲು ನಿಗದಿಗಿಂತಲೂ ಹೆಚ್ಚಿನ ಸಮಯ ತೆಗೆದುಕೊಂಡಿರುವ ಕಾರಣ  ಶ್ರೀಲಂಕಾ ತಂಡದ ನಾಯಕ ಉಪುಲ್‌ ತರಂಗಾ ಮೇಲೆ ಎರಡು ಪಂದ್ಯಗಳ ನಿಷೇಧ ಹೇರಲಾಗಿದೆ.

ಐಸಿಸಿ ರೆಫರಿಗಳ ಸಮಿತಿಯ  ಡೇವಿಡ್‌ ಬೂನ್‌ ಅವರು ತರಂಗಾ ಮೇಲೆ ಭಾನುವಾರ ಕಠಿಣ ಕ್ರಮ ಕೈಗೊಂಡಿದ್ದಾರೆ. ಹೀಗಾಗಿ ಎಡಗೈ ಬ್ಯಾಟ್ಸ್‌ಮನ್‌ ಉಪುಲ್‌ ಅವರು ಜೂನ್‌ 8 ರಂದು ಓವಲ್‌ನಲ್ಲಿ ನಡೆಯುವ ಭಾರತ ವಿರುದ್ಧದ ಪಂದ್ಯ ಮತ್ತು ಜೂನ್‌ 12 ರಂದು ಕಾರ್ಡಿಫ್‌ನಲ್ಲಿ ಜರುಗುವ ಪಾಕಿಸ್ತಾನ ಎದುರಿನ  ಹೋರಾಟಗಳಲ್ಲಿ ಕಣಕ್ಕಿಳಿಯುವ ಅವಕಾಶ ಕಳೆದುಕೊಂಡಿದ್ದಾರೆ. ಐಸಿಸಿ ಕ್ರಮಕ್ಕೆ ಬದ್ಧನಾಗಿದ್ದೇನೆ ಎಂದು ತರಂಗಾ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry