ರಾಮನಗರ ಜಿ.ಪಂ ಅಧ್ಯಕ್ಷ ಇಂದು ರಾಜೀನಾಮೆ?

7

ರಾಮನಗರ ಜಿ.ಪಂ ಅಧ್ಯಕ್ಷ ಇಂದು ರಾಜೀನಾಮೆ?

Published:
Updated:
ರಾಮನಗರ ಜಿ.ಪಂ ಅಧ್ಯಕ್ಷ ಇಂದು ರಾಜೀನಾಮೆ?

ಕನಕಪುರ: ‘ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್‌ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಲಿದ್ದಾರೆ’ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಹಿಂದೆ ಎಲ್ಲ ತಾಲ್ಲೂಕುಗಳಿಗೂ ಅಧಿಕಾರದ ಅವಕಾಶ ಮಾಡಿಕೊಡಬೇಕೆಂದು ಮಾತುಕತೆ ಆಗಿತ್ತು, ಅದರಂತೆ ಯೋಗೇಶ್ವರ್‌ ಅವರಲ್ಲಿ ಮಾತನಾಡಿದ್ದು ರಾಜೀನಾಮೆ ಕೊಡಿಸುವುದಾಗಿ ಒಪ್ಪಿಗೆ ನೀಡಿದ್ದಾರೆ ಎಂದರು.

ಮಾಗಡಿ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ದುಡಿದಿರುವ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಅವರಿಗೆ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದರು. ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ. ಸೂಕ್ತ ಕಾಲದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದರು.

‘ಗೃಹ ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ, ನಾನಾಗಿ ಕೇಳಿಲ್ಲ, ಪಕ್ಷ ಕೊಡುವ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದರು. ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷ ಬಿಡುವುದಾಗಿ ಹೇಳಿದ್ದಾರೆಂದು ಕೇಳಿದ ಪ್ರಶ್ನೆಗೆ, ‘ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ ಚೆನ್ನಾಗಿ ಬೆಳೆಯಲು ಶ್ರಮಿಸಿದ ಅವರು ಬೇರೆ ಪಕ್ಷಕ್ಕೆ ಹೋಗುವುದಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry