ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲಿನಿಂದಲೂ ನಮ್ಮ ದೇಶದ ಜನರಿಗೆ ಕಾಂಗ್ರೆಸ್ ಪಕ್ಷದ ಮನಸ್ಥಿತಿಯ ಅರಿವಿದೆ: ವೆಂಕಯ್ಯ ನಾಯ್ಡು

Last Updated 5 ಜೂನ್ 2017, 14:29 IST
ಅಕ್ಷರ ಗಾತ್ರ

ಚೆನ್ನೈ/ಹೈದರಾಬಾದ್: ಕೇಂದ್ರ ಸರ್ಕಾರದ ವೈಫಲ್ಯದ ಕುರಿತಾಗಿ ಕಾಂಗ್ರೆಸ್ ತಪ್ಪಾಗಿ ಪ್ರಕಟಿಸಿದ ಜಮ್ಮು ಕಾಶ್ಮೀರದ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮಾತಿನ ಸಮರಕ್ಕೆ ಕಾರಣವಾಗಿದೆ.

‘ಬಿಜೆಪಿಯು ಕಾಶ್ಮೀರ ಸಮಸ್ಯೆ ನಿಭಾಯಿಸುವಲ್ಲಿ ವಿಫಲವಾಗಿದೆ. ಕಾಶ್ಮೀರದಲ್ಲಿ ನೆಲೆಸಿರುವ ಶಾಂತಿಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ  ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರ ಮಾತಿಗೆ ಹೈದರಾಬಾದ್‌ನಲ್ಲಿ ಪ್ರತಿಕ್ರಿಯಿಸಿದ ಕೇಂದ್ರ  ಸಚಿವ ವೆಂಕಯ್ಯ ನಾಯ್ಡು ಅವರು, ‘ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ‘ಮೊದಲಿನಿಂದಲೂ ನಮ್ಮ ದೇಶದ ಜನರಿಗೆ ಕಾಂಗ್ರೆಸ್ ಪಕ್ಷದ ಮನಸ್ಥಿತಿಯ ಅರಿವಿದೆ’ ಎಂದಿದ್ದಾರೆ.

‘ಆದರೆ ಕಾಂಗ್ರೆಸ್‌ ಪಕ್ಷವು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡುವ ಮನಸ್ಥಿತಿ ಹೊಂದಿದ್ದರೆ, ಸುಮಾರು ವರ್ಷಗಳಿಂದ ನಮ್ಮ ದೇಶದ ಸಾರ್ವಭೌಮತ್ವ ಹಾಗೂ ಪ್ರಾದೇಶಿಕ ಸಮಗ್ರತೆ ಕಾಪಾಡುವಲ್ಲಿ ಹುತಾತ್ಮರಾದ ನಮ್ಮ ಸೈನಿಕರ ಪ್ರಾಣವನ್ನು ಮರಳಿ ತಂದು ಕೊಡಲು ಸಾಧ್ಯವಾ?’ ಎಂದು ಪ್ರಶ್ನಿಸಿದ್ದಾರೆ.  

ಭಾನುವಾರ ಲಖನೌದಲ್ಲಿ ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಕಿರುಹೊತ್ತಿಗೆ ಪ್ರಕಟಿಸಿದ್ದ ಕಾಂಗ್ರೆಸ್, ಹೊತ್ತಿಗೆಯಲ್ಲಿ ಜಮ್ಮು ಮತ್ತು ಕಾಶ್ಮೀರವು ಭಾರತ ಆಕ್ರಮಿತ ಪ್ರದೇಶ ಎಂಬ ನಕ್ಷೆ ಪ್ರಕಟಿಸಿ, ಮುಜುಗರಕ್ಕೀಡಾಗಿತ್ತು. ಕೊನೆಗೆ ತನ್ನ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT