ರಾಜ್ಯಕ್ಕೆ ನಾಳೆ ನೈರುತ್ಯ ಮುಂಗಾರು ಪ್ರವೇಶ?

7

ರಾಜ್ಯಕ್ಕೆ ನಾಳೆ ನೈರುತ್ಯ ಮುಂಗಾರು ಪ್ರವೇಶ?

Published:
Updated:
ರಾಜ್ಯಕ್ಕೆ ನಾಳೆ ನೈರುತ್ಯ ಮುಂಗಾರು ಪ್ರವೇಶ?

ಬೆಂಗಳೂರು: ನೈರುತ್ಯ ಮುಂಗಾರು ರಾಜ್ಯವನ್ನು ಜೂನ್‌ 7 ಅಥವಾ 8 ರಂದು ಪ್ರವೇಶಿಸುವ ಸಾಧ್ಯತೆ ಇದೆ.

‘ವಾಡಿಕೆಗಿಂತ 2 ದಿನ ಮೊದಲೇ ಮುಂಗಾರು ಕೇರಳವನ್ನು ಪ್ರವೇಶಿಸಿತ್ತು. ಆದರೆ, ಮುಂಗಾರು ದುರ್ಬಲಗೊಂಡಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಬುಧವಾರ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ’ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ವಿಜ್ಞಾನಿ ಎಸ್‌.ಎಸ್‌.ಎಂ. ಗವಾಸ್ಕರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ 9ರಂದು ಹಾಗೂ ಉತ್ತರ ಒಳನಾಡಿನಲ್ಲಿ 10–11ರೊಳಗೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ’ ಎಂದರು.

ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ರಮೇಶ್‌ ಬಾಬು ಮಾತನಾಡಿ, ‘ಮುಂಗಾರು ಪ್ರವೇಶಕ್ಕೆ ಪೂರಕವಾಗಿ ಮೋರಾ ಚಂಡಮಾರುತ ಇದ್ದುದರಿಂದ ಕೇರಳ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿಯೂ ಮಳೆಯಾಗಿತ್ತು. ಆದರೆ, ಇದೇ ವೇಳೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿತ್ತು. ಇದರಿಂದ ತೇವಾಂಶವನ್ನು ಅದು ತನ್ನತ್ತ ಸೆಳೆದುಕೊಂಡಿತ್ತು. ಇದರಿಂದ ಮುಂಗಾರು ದುರ್ಬಲಗೊಂಡಿತು’ ಎಂದು ತಿಳಿಸಿದರು.

‘ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳುತ್ತಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ’ ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry