ನಾನು ಎಲ್ಲ ಪಂದ್ಯಗಳನ್ನು ವೀಕ್ಷಿಸುವೆ: ವಿಜಯ್ ಮಲ್ಯ ಟ್ವೀಟ್

7

ನಾನು ಎಲ್ಲ ಪಂದ್ಯಗಳನ್ನು ವೀಕ್ಷಿಸುವೆ: ವಿಜಯ್ ಮಲ್ಯ ಟ್ವೀಟ್

Published:
Updated:
ನಾನು ಎಲ್ಲ ಪಂದ್ಯಗಳನ್ನು ವೀಕ್ಷಿಸುವೆ: ವಿಜಯ್ ಮಲ್ಯ ಟ್ವೀಟ್

ಲಂಡನ್‌: ಭಾನುವಾರ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್ ಟೂರ್ನಿಯ ‘ಬಿ’ ಗುಂಪಿನ ಪಂದ್ಯದಲ್ಲಿ ಭಾರತ ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಉದ್ಯಮಿ ವಿಜಯ್‌ ಮಲ್ಯ ಕಾಣಿಸಿಕೊಂಡಿದ್ದರು.

ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿರುವ ವಿಡಿಯೊ ಮತ್ತು ಮಾಜಿ ಕ್ರಿಕೆಟಿಗ ಮತ್ತು ಕಾಮೆಂಟೇಟರ್ ರವಿ ಶಾಸ್ತ್ರಿ ಜತೆ ಕಾಣಿಸಿಕೊಂಡಿರುವ ಚಿತ್ರ ಸಾಮಾಜಿಕ ತಾಣದಲ್ಲಿ ಹರಿದಾಡಿತ್ತು.

ಎಜ್‍ಬಾಸ್ಟನ್‍ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಿರುವುದನ್ನು ಮಾಧ್ಯಮಗಳು ಸುದ್ದಿ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ಮಲ್ಯ, ನಾನು ಎಜ್‍ಬಾಸ್ಟನ್‍ನಲ್ಲಿ ಭಾರತ-ಪಾಕ್ ನಡುವಿನ ಪಂದ್ಯ ವೀಕ್ಷಿಸಿರುವುದನ್ನು ಮಾಧ್ಯಮಗಳು ದೊಡ್ಡದಾಗಿ ಬಿಂಬಿಸಿ ಸುದ್ದಿ ಮಾಡುತ್ತಿವೆ. ನಾನು ಎಲ್ಲ ಪಂದ್ಯಗಳನ್ನು ವೀಕ್ಷಿಸಲಿದ್ದೇನೆ ಮತ್ತು ಭಾರತ ತಂಡವನ್ನು ಬೆಂಬಲಿಸಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದರ ಜತೆಗೆ ವಿರಾಟ್ ಕೊಹ್ಲಿ ಬಗ್ಗೆಯೂ ಮಲ್ಯ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

[related]

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry