ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ರದ್ದತಿಯ ಬಳಿಕ ದೇಶದ ಆರ್ಥಿಕ ಪ್ರಗತಿ ಇಳಿಕೆ: ಮನಮೋಹನ್‌ ಸಿಂಗ್‌

Last Updated 6 ಜೂನ್ 2017, 12:57 IST
ಅಕ್ಷರ ಗಾತ್ರ

ನವದೆಹಲಿ: ನೋಟು ರದ್ದತಿಯ ಬಳಿಕ ದೇಶದ ಆರ್ಥಿಕ ಪ್ರಗತಿ ಕುಂಠಿತವಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮಂಗಳವಾರ ತಿಳಿಸಿದ್ದಾರೆ.

ಇಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.  ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಮುಂಬರುವ ರಾಷ್ಟ್ರಪತಿ ಚುನಾವಣೆ ಕುರಿತಂತೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎನ್ನಲಾಗಿದೆ.

ನೋಟು ರದ್ದತಿಯಿಂದ ದೇಶದ ಖಾಸಗಿ ವಲಯಕ್ಕೆ ಬಂಡವಾಳ ಹೂಡಿಕೆಯ ಹರಿವು ಕಡಿಮೆಯಾಗಿದೆ. ಇದರ ಪರಿಣಾಮ ಆರ್ಥಿಕ ಪ್ರಗತಿ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಮನಮೋಹನ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಶೇ.80 ರಷ್ಟು ಪ್ರಮಾಣದಲ್ಲಿ ನಗದು ವಹಿವಾಟು ನಡೆಯುತ್ತಿತ್ತು. ನೋಟು ರದ್ದತಿಯ ಪರಿಣಾಮ ನಗದು ವಹಿವಾಟಿನ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಮನಮೋಹನ್‌ ಸಿಂಗ್ ವಿಶ್ಲೇಷಣೆ ಮಾಡಿದ್ದಾರೆ ಎಂದು ಖಾಸಗಿ ಸುದ್ದಿ  ವಾಹಿನಿಯೊಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT