ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ತೊರೆಯಲಿರುವ ಸೋನಿಯಾ ಗಾಂಧಿ?

7
ಅ.15ಕ್ಕೆ ಪಕ್ಷದ ಆಂತರಿಕ ಚುನಾವಣೆ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ತೊರೆಯಲಿರುವ ಸೋನಿಯಾ ಗಾಂಧಿ?

Published:
Updated:
ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ತೊರೆಯಲಿರುವ ಸೋನಿಯಾ ಗಾಂಧಿ?

ನವದೆಹಲಿ: ಅಕ್ಟೋಬರ್‌ 15ರಂದು ಕಾಂಗ್ರೆಸ್‌ನ  ಆಂತರಿಕ ಚುನಾವಣೆ ನಿಗದಿಯಾಗಿದ್ದು, ಸೋನಿಯಾ ಗಾಂಧಿ ಅಧ್ಯಕ್ಷ ಸ್ಥಾನ ತೊರೆಯುವ ಸಾಧ್ಯ ಹೆಚ್ಚಿದೆ.

ಆಂತರಿಕ ಚುನಾವಣೆ ಹೊತ್ತಿಗೆ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದು ಸಾಧ್ಯವಾಗುವಂತೆ ಸೋನಿಯಾ ಅವರು ಸ್ಥಾನ ಬಿಟ್ಟುಕೊಡಬಹುದು ಎಂದು ತಿಳಿದು ಬಂದಿದೆ.

ಪಕ್ಷದ ಆಂತರಿಕ ಚುನಾವಣೆಯನ್ನು ವೇಗವಾಗಿ ಹಾಗೂ ಪ್ರಾಮಾಣಿಕ ರೀತಿಯಲ್ಲಿ ಅಕ್ಟೋಬರ್‌ 15ರಂದು ನಡೆಸಲು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಮಂಗಳವಾರ ನಿರ್ಧರಿಸಲಾಗಿದೆ. ಆದರೆ ಸಭೆಯಲ್ಲಿ ರಾಹುಲ್‌ಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹಿರಿಯ ಮುಖಂಡರು ಹೇಳಿದ್ದಾರೆ.

130 ವರ್ಷಗಳಷ್ಟು ಹಳೆಯ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಆಯ್ಕೆ ಮಾಡಲು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಎ.ಕೆ.ಆಂಟೊನಿ ಸೇರಿದಂತೆ ಹಿರಿಯ ಮುಖಂಡರು ಈ ಹಿಂದಿನ ಸಭೆಗಳಲ್ಲಿ ಒಲವು ತೋರಿದ್ದರು.

2013ರ ಜನವರಿಯಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry