ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಘಲ್‍ಸರೈ ರೈಲ್ವೆ ನಿಲ್ದಾಣಕ್ಕೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರೈಲ್ವೆ ನಿಲ್ದಾಣ ಎಂದು ಹೆಸರಿಡಲು ಒತ್ತಾಯ

Last Updated 7 ಜೂನ್ 2017, 6:28 IST
ಅಕ್ಷರ ಗಾತ್ರ

ಲಖನೌ: ಉತ್ತರಪ್ರದೇಶದ ಮುಘಲ್‍ಸರೈ ರೈಲು ನಿಲ್ದಾಣದ ಹೆಸರು ಬದಲಿಸಲು ಆದಿತ್ಯನಾಥ ಯೋಗಿ ನೇತೃತ್ವದ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ. ಭಾರತೀಯ ಜನಸಂಘದ ನಾಯಕರಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರನ್ನು ಮುಘಲ್‍ಸರೈ ರೈಲ್ವೆ ನಿಲ್ದಾಣಕ್ಕಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ಬಗ್ಗೆ ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿದ್ದೇವೆ ಎಂದು ಉತ್ತರಪ್ರದೇಶದ ಸಚಿವ ಸಿದ್ದಾರ್ಥ್ ನಾಥ್ ಸಿಂಗ್  ಹೇಳಿದ್ದಾರೆ.

ಆದಿತ್ಯನಾಥ ಯೋಗಿ ಅವರ ನೇತೃತ್ವದಲ್ಲಿ ಸೇರಿದ ಸಚಿವ ಸಂಪುಟ ಸಭೆಯಲ್ಲಿ ರೈಲ್ವೆ ನಿಲ್ದಾಣದ ಹೆಸರು ಬದಲಾವಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. 1968 ಫೆಬ್ರುವರಿ 11ರಂದು ದೀನ್ ದಯಾಳ್ ಉಪಾಧ್ಯಾಯ ಅವರು ನಿಗೂಢವಾಗಿ ಸಾವಿಗೀಡಾಗಿದ್ದು ಮುಘಲ್‍ಸರೈ ರೈಲ್ವೆ ನಿಲ್ದಾಣದಲ್ಲಾಗಿತ್ತು.

ದೀನ್ ದಯಾಳ್ ಉಪಾಧ್ಯಾಯ ಅವರ 100ನೇ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರಪ್ರದೇಶ ಸರ್ಕಾರ ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದ ಹೆಸರು ಬದಲಾವಣೆ ಮಾಡಲು ಚಿಂತನೆ ನಡೆಸಿದೆ.

ಈ ಹಿಂದೆ ಏಪ್ರಿಲ್ ತಿಂಗಳಲ್ಲಿ ಆಗ್ರಾ ವಿಮಾನ ನಿಲ್ದಾಣಕ್ಕೂ ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರನ್ನಿಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT