ಮಂಡ್‍ಸೌರ್‍ನಲ್ಲಿ ಜಿಲ್ಲಾಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರತಿಭಟನಾಕಾರರು

7

ಮಂಡ್‍ಸೌರ್‍ನಲ್ಲಿ ಜಿಲ್ಲಾಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರತಿಭಟನಾಕಾರರು

Published:
Updated:
ಮಂಡ್‍ಸೌರ್‍ನಲ್ಲಿ ಜಿಲ್ಲಾಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರತಿಭಟನಾಕಾರರು

ಭೋಪಾಲ್‌: ಮಧ್ಯಪ್ರದೇಶದ ಮಂಡ್‌ಸೌರ್‌ ಜಿಲ್ಲೆಯಲ್ಲಿ ಪೊಲೀಸರ ಗುಂಡೇಟಿಗೆ ಐವರು ರೈತರು ಸಾವಿಗೀಡಾಗಿದ್ದು, ಈ ಘಟನೆಯಿಂದ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ಬುಧವಾರ ಮಂಡ್‍ಸೌರ್ ಜಿಲ್ಲಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ.

ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಮಂಗಳವಾರ ಹಿಂಸಾರೂಪ ಪಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದರು, ಪ್ರಸ್ತುತ ಪ್ರದೇಶದಲ್ಲೀಗ  ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಪೊಲೀಸರ ಗುಂಡಿಗೆ ಬಲಿಯಾಗಿದ್ದ ರೈತನೊಬ್ಬನ ಶವವನ್ನಿರಿಸಿ ರೈತರು ಬುಧವಾರ ಪ್ರತಿಭಟನೆ ಮುಂದುವರಿಸಿದ್ದರು, ಪ್ರತಿಭಟನಾಕಾರರನ್ನು ಭೇಟಿ ಮಾಡಲೆಂದು ಜಿಲ್ಲಾಧಿಕಾರಿ ಹೋದಾಗ ಪ್ರತಿಭಟನಾಕಾರರು ಹಲ್ಲೆ ನಡೆಸಿದ್ದಾರೆ.

ಅದೇ ವೇಳೆ ಹಿರಿಯ ಪೊಲೀಸ್ ಅಧಿಕಾರಿ ಜತೆಗೂ ಪ್ರತಿಭಟನಾಕಾರರು ಅನುಚಿತ ವರ್ತನೆ ತೋರಿದ್ದಾರೆ.  ರೈತರು ಇಷ್ಟೊಂದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರಿ ಅಧಿಕಾರಿಗಳು ತಿರುಗಿಯೂ ನೋಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

[related]

ವಾಹನಗಳಿಗೆ ಬೆಂಕಿ

ರೈತರ ಪ್ರತಿಭಟನೆ ಮುಂದುವರಿದಿದ್ದು, ದೇವಾಸ್ ಹತ್ಪಿಪಾಲ್ಯದಲ್ಲಿರುವ ಪೊಲೀಸ್ ಠಾಣೆ ಮುಂದೆ ನಿಲ್ಲಿಸಲಾಗಿದ್ದ ವಾಹನಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry