ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬರಿ ಮಸೀದಿ ಧ್ವಂಸಕ್ಕೆ ಒಳಸಂಚು: ಅಡ್ವಾಣಿ, ಜೋಷಿ, ಉಮಾಗೆ ಖುದ್ದು ಹಾಜರಾತಿಯಿಂದ ವಿನಾಯಿತಿ

Last Updated 7 ಜೂನ್ 2017, 10:12 IST
ಅಕ್ಷರ ಗಾತ್ರ

ಲಖನೌ: ಬಾಬರಿ ಮಸೀದಿ ಧ್ವಂಸದ ಒಳಸಂಚಿಗೆ ಸಂಬಂಧಿಸಿದ ಪ್ರಕರಣದಲ್ಲಿ  ಬಿಜೆಪಿಯ ಹಿರಿಯ ಮುಖಂಡರು, ಸಂಸದರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ, ಕೇಂದ್ರ ಸಚಿವೆ ಉಮಾಭಾರತಿ ಅವರಿಗೆ ಲಖನೌದ ವಿಶೇಷ ಸಿಬಿಐ ನ್ಯಾಯಾಲಯ  ಖುದ್ದು ಹಾಜರಾತಿಯಿಂದ ವಿನಾಯ್ತಿ  ನೀಡಿದೆ.

ಮಸೀದಿ ಧ್ವಂಸವಾಗಿ 25 ವರ್ಷಗಳ ಬಳಿಕ ಒಂಬತ್ತು ಜನರ ವಿರುದ್ಧ ನ್ಯಾಯಾಲಯ ದೋಷಾರೋಪ ನಿಗದಿ ಮಾಡಿತ್ತು.

ವಿಎಚ್ ಪಿ ಮುಖಂಡ ವಿಷ್ಣುಹರಿ ದಾಲ್ಮಿಯಾ, ಬಿಜೆಪಿಯ ವಿನಯ್ ಕಟಿಯಾರ್ ಮತ್ತು ಸಾದ್ವಿ ರೀತಾಂಬರ ಅವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 30 ರಂದು ಸಿಬಿಐ ನ್ಯಾಯಾಲಯ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ ಸೇರಿದಂತೆ 6 ಜನರಿಗೆ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT