ರಾಮನಗರದಲ್ಲಿ ಪ್ಲಾಸ್ಟಿಕ್ ಮೊಟ್ಟೆ ಪತ್ತೆ ?

7

ರಾಮನಗರದಲ್ಲಿ ಪ್ಲಾಸ್ಟಿಕ್ ಮೊಟ್ಟೆ ಪತ್ತೆ ?

Published:
Updated:
ರಾಮನಗರದಲ್ಲಿ ಪ್ಲಾಸ್ಟಿಕ್ ಮೊಟ್ಟೆ ಪತ್ತೆ ?

ರಾಮನಗರ: ಜಿಲ್ಲೆಯ ಮಾಗಡಿ ಪಟ್ಟಣದ ಕಲ್ಯಾಗೇಟ್ ನಿವಾಸಿ ಲಕ್ಷ್ಮಿ ಅವರು ಕೊಂಡು ತಂದ ಮೊಟ್ಟೆಗಳಲ್ಲಿ ಪ್ಲಾಸ್ಟಿಕ್ ಮೊಟ್ಟೆಗಳು ಪತ್ತೆಯಾಗಿವೆ.

ಬುಧವಾರ ಅವರು ಮೊಟ್ಟೆಗಳನ್ನು ಬೇಯಿಸಿ ಸಿಪ್ಪೆ ತೆಗೆಯುವ ಸಂದರ್ಭದಲ್ಲಿ ಕೆಲವು ಮೊಟ್ಟೆಯಲ್ಲಿ ಪ್ಲಾಸ್ಟಿಕ್‌ನಂತೆ ಪೊರೆ ಕಂಡುಬಂದಿತು. ಹಳದಿ ಬಣ್ಣದ ಭ್ರೂಣ ಕೂಡ ಕಲ್ಲಿನಂತೆ ಗಟ್ಟಿಯಾಗಿತ್ತು ಎಂದು ಲಕ್ಷ್ಮಿ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿ ಸೌಮ್ಯ ಅವರು ಲಕ್ಷ್ಮಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಮೊಟ್ಟೆಗಳನ್ನು ಪರೀಕ್ಷೆಗೆಂದು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿ ಅಧಿಕಾರಿ ತಿಳಿಸಿದ್ದಾರೆ.

[related]

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry