ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂಕೋರ್ಟ್‌ನಲ್ಲಿ ಜೂನ್‌ 15ರಂದು ವಿಚಾರಣೆ

Last Updated 7 ಜೂನ್ 2017, 10:55 IST
ಅಕ್ಷರ ಗಾತ್ರ

ನವದೆಹಲಿ: ಹತ್ಯೆಗಾಗಿ ಜಾನುವಾರು ಮಾರಾಟ ಮಾಡುವುದನ್ನು ಸರ್ಕಾರ ನಿಷೇಧಿಸಿರುವ ವಿಷಯಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ಜೂನ್ 15ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈದರಾಬಾದ್‌ನ ಸಂಘಟನೆಯೊಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ‘ಜಾನುವಾರು ಮಾರಾಟದ ಮೇಲಿನ ನಿರ್ಬಂಧವನ್ನು ಪ್ರತಿಷ್ಠೆಯ ವಿಷಯವನ್ನಾಗಿಸುವುದಿಲ್ಲ. ಎಲ್ಲ ಸಲಹೆಗಳನ್ನು ಪರಿಶೀಲಿಸಲಾಗುವುದು’ ಎಂದು ಪರಿಸರ ಸಚಿವ ಹರ್ಷವರ್ಧನ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಮದ್ರಾಸ್ ಹೈಕೋರ್ಟ್ ಕೆಲ ದಿನಗಳ ಹಿಂದೆ ಕೇಂದ್ರದ ಆದೇಶಕ್ಕೆ ನಾಲ್ಕು ವಾರಗಳ ತಡೆಯಾಜ್ಞೆ ನೀಡಿತ್ತು. ಆದರೆ, ನಿಯಮವನ್ನು ತಡೆಹಿಡಿಯಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ತಳ್ಳಿಹಾಕಿತ್ತು. ಜಾನುವಾರು ಮಾರಾಟದ ಮೇಲಿನ ನಿರ್ಬಂಧಕ್ಕೆ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಮೇಘಾಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT