ಜೂನ್‌ 12ಕ್ಕೆ ಕರ್ನಾಟಕ ಬಂದ್‌ : ವಾಟಾಳ್‌ ನಾಗರಾಜ್‌

7
ಬಯಲು ಸೀಮೆಗೆ ಶಾಶ್ವತ ನೀರಾವರಿ

ಜೂನ್‌ 12ಕ್ಕೆ ಕರ್ನಾಟಕ ಬಂದ್‌ : ವಾಟಾಳ್‌ ನಾಗರಾಜ್‌

Published:
Updated:
ಜೂನ್‌ 12ಕ್ಕೆ ಕರ್ನಾಟಕ ಬಂದ್‌ : ವಾಟಾಳ್‌ ನಾಗರಾಜ್‌

ಚಿಕ್ಕಬಳ್ಳಾಪುರ: ‘ಬಯಲು ಸೀಮೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಒಕ್ಕೂಟದ ವತಿಯಿಂದ ಜೂನ್‌ 12 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ’ ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಒತ್ತಾಯಿಸಿ ಕೋಲಾರದಲ್ಲಿ ನಡೆಯುತ್ತಿರುವ ಹೋರಾಟ ಒಂದು ವರ್ಷ ಪೂರೈಸಿದರೂ ಸರ್ಕಾರ ಯೋಜನೆಯ ವಿಚಾರದಲ್ಲಿ ಸಕಾರಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದರು.

ಜತೆಗೆ ಬಯಲು ಸೀಮೆ ಜಿಲ್ಲೆಗಳ ಯಾವೊಬ್ಬ ಜನಪ್ರತಿನಿಧಿಯೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಟ್ಟದಲ್ಲಿ ಈ ಕುರಿತು ಧ್ವನಿ ಎತ್ತುತ್ತಿಲ್ಲ ಎಂದು ವಾಟಾಳ್‌ ನಾಗರಾಜ್‌ ಆರೋಪಿಸಿದರು.

ಸರ್ಕಾರ ಮತ್ತು ಜನಪ್ರತಿನಿಧಿಗಳ ಈ ಧೋರಣೆ ಖಂಡಿಸಿ ಬಂದ್‌ಗೆ ಕರೆ ನೀಡುತ್ತಿದ್ದೇವೆ  ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry