ಮಂಡ್‌ಸೌರ್‌ ಹಿಂಸಾಚಾರ: ಮಧ್ಯಪ್ರದೇಶ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಇಲಾಖೆ

7

ಮಂಡ್‌ಸೌರ್‌ ಹಿಂಸಾಚಾರ: ಮಧ್ಯಪ್ರದೇಶ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಇಲಾಖೆ

Published:
Updated:
ಮಂಡ್‌ಸೌರ್‌ ಹಿಂಸಾಚಾರ: ಮಧ್ಯಪ್ರದೇಶ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಇಲಾಖೆ

ನವದೆಹಲಿ: ಮಧ್ಯಪ್ರದೇಶದ ಮಂಡ್‌ಸೌರ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಸಮಗ್ರ ವರದಿ ನೀಡುವಂತೆ ಕೇಂದ್ರ ಗೃಹ ಇಲಾಖೆಯು ರಾಜ್ಯ ಸರ್ಕಾರವನ್ನು ಕೇಳಿದೆ.

ರೈತರ ಪ್ರತಿಭಟನೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿ 5 ಮಂದಿ ರೈತರು ಗುಂಡೇಟಿಗೆ ಬಲಿಯಾಗಿದ್ದರು. ಈ ಹಿಂಸಾಚಾರ ಬುಧವಾರವೂ ಮುಂದುವರಿದಿದೆ. ಪ್ರತಿಭಟನಾಕಾರರು ಹಲವು ಸರ್ಕಾರಿ ಹಾಗೂ ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕೆಲ ವಾಹನಗಳಿಗೆ ಹಾನಿ ಮಾಡಿದ್ದಾರೆ.

‘ರೈತರ ಪ್ರತಿಭಟನೆ, ಹಿಂಸಾಚಾರ, ಮೃತಪಟ್ಟ ರೈತರ ಬಗ್ಗೆ ಸಮಗ್ರ ವರದಿ ನೀಡುವಂತೆ ಮಧ್ಯ ಪ್ರದೇಶ ಸರ್ಕಾರವನ್ನು ಕೇಳಲಾಗಿದೆ. ಹಿಂಸಾಚಾರ ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಕೇಂದ್ರದಿಂದ ಹೆಚ್ಚುವರಿ ಭದ್ರತಾ ಪಡೆಯನ್ನೂ ಮಂಡ್‌ಸೌರ್‌ಗೆ ಕಳಿಸಲಾಗಿದೆ’ ಎಂದು ಗೃಹ ಇಲಾಖೆಯ ವಕ್ತಾರ ಅಶೋಕ್‌ ಪ್ರಸಾದ್‌ ತಿಳಿಸಿದ್ದಾರೆ.

‘ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್‌ಗೆ ಆದೇಶಿಸಿರಲಿಲ್ಲ’ ಎಂದು ಮಂಡ್‌ಸೌರ್‌ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ 5 ಮಂದಿ ರೈತರು ಗುಂಡೇಟಿನಿಂದ ಮೃತಪಟ್ಟಿದ್ದು ಹೇಗೆ ಎಂಬ ಪ್ರಶ್ನೆ ಈಗ ಎದ್ದಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಜೂನ್‌ 1ರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry