ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 20 ಕಾರ್ಮಿಕರ ಸಾವು

Last Updated 7 ಜೂನ್ 2017, 17:03 IST
ಅಕ್ಷರ ಗಾತ್ರ

ಭೋಪಾಲ್‌: ಬಾಲಘಾಟ್‌ನ ಪಟಾಕಿ  ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದ 20 ಜನ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 20 ಜನ ಬೆಂಕಿಗೆ ಆಹುತಿಯಾಗಿದ್ದು, 10ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ. ಕಾರ್ಖಾನೆಯ ಗೋಡೆ ಕುಸಿದು ಬಿದ್ದಿದ್ದು ಸ್ಫೋಟದ ಭೀಕರತೆಗೆ ಸಾಕ್ಷಿಯಂತಿತ್ತು.

ಮಧ್ಯ ಪ್ರದೇಶದ ಭೋಪಾಲ್‌ನಿಂದ 440 ಕಿ.ಮೀ. ದೂರದಲ್ಲಿರುವ ಬಾಲಘಾಟ್‌ನ ಪಟಾಕಿ ಕಾರ್ಖಾನೆಯಲ್ಲಿ ಮಧ್ಯಾಹ್ನ 3ಕ್ಕೆ ಸ್ಫೋಟ ಸಂಭವಿಸಿದೆ.

ಬೆಂಕಿಯಲ್ಲಿ ಸಿಲುಕಿ ಮೃತಪಟ್ಟ ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌ ಬುಧವಾರ ಘೋಷಿಸಿದ್ದಾರೆ.

ನಿಯಮ ಉಲ್ಲಂಘನೆ ಹಾಗೂ ಸುರಕ್ಷತಾ ಕ್ರಮಗಳಿಲ್ಲದ ಕಾರಣ ದೇಶದ ಹಲವು ಉತ್ಪಾದನಾ ಕಾರ್ಖಾನೆಗಳಲ್ಲಿ ಸ್ಫೋಟದಿಂದ ಕಾರ್ಮಿಕರು ಸಾವಿಗೀಡಾಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT