ಇದೇ 21ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಸಂಸ್ಥೆಯ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ದೀಪಕ್ ರಾಜಣ್ಣ ಅವರು, ‘ನಮ್ಮ ಸಂಸ್ಥೆ ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಿಂದಲೇ. ಹೀಗಾಗಿ ನಮ್ಮ ನಗರಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.