ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ₹ 6,000 ಕೋಟಿ ಸಾಲ ಪರಿಹಾರಕ್ಕೆ ಯೋಜನೆ ಘೋಷಿಸಿದ ಮಧ್ಯಪ್ರದೇಶ ಸರ್ಕಾರ

Last Updated 8 ಜೂನ್ 2017, 4:55 IST
ಅಕ್ಷರ ಗಾತ್ರ

ಮಂದಸೌರ್‌ (ಮಧ್ಯಪ್ರದೇಶ): ಸಾಲ ಮನ್ನಾ ಮತ್ತು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಮಧ್ಯಪ್ರದೇಶದ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಅಲ್ಲಿನ ಸರ್ಕಾರ ಕೊನೆಗೂ ತಲೆಬಾಗಿದೆ.

ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸುಮಾರು ₹ 6,000 ಕೋಟಿ ಸಾಲ ಪರಿಹಾರಕ್ಕೆ ಯೋಜನೆಯೊಂದನ್ನು ಸರ್ಕಾರ ಘೋಷಿಸಿದೆ. ಸುಮಾರು 6 ಲಕ್ಷ ರೈತರಿಗೆ ಇದರಿಂದ ಪ್ರಯೋಜನವಾಗಲಿದೆ.

ಬೆಳೆ ಸಾಲದ ಬಡ್ಡಿ ಮನ್ನಾ ಮಾಡಲೂ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಬಲ ಬೆಲೆ ನೀಡಲು ಯೋಜನೆ ರೂಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸಾಲ ಮನ್ನಾಕ್ಕೆ ಆಗ್ರಹಿಸಿ ಜೂನ್ 1ರಿಂದ ಮಂದಸೌರ್‌ನಲ್ಲಿ ರೈತರುಆರಂಭಿಸಿದ್ದ ಪ್ರತಿಭಟನೆ ಬುಧವಾರ ಹಿಂಸಾಚಾರಕ್ಕೆ ತಿರುಗಿತ್ತು. ಮಹು–ನೀಮಚ್‌ ಹೆದ್ದಾರಿಯಲ್ಲಿ ಪ್ರತಿಭಟನಾಕಾರರು ಟ್ರಕ್‌, ಬಸ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ  ಮೀಸಲು ಪಡೆಯ 1,100 ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿತ್ತು.

[Related]

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT