ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ಶ್ರೀಲಂಕಾ

7
ಭಾರತಕ್ಕೆ ಲಭಿಸಿದ ಮೊದಲ ಬ್ಯಾಟಿಂಗ್‌ ಅವಕಾಶ

ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ಶ್ರೀಲಂಕಾ

Published:
Updated:
ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ಶ್ರೀಲಂಕಾ

ಲಂಡನ್‌: ಚಾಂಪಿಯನ್ಸ್‌ ಟ್ರೋಫಿಯ ಭಾರತದ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ಫೀಲ್ಡಿಂಗ್‌ ಆರಿಸಿಕೊಂಡಿದೆ.

ಪಾಕಿಸ್ತಾನದ ವಿರುದ್ಧ ಮೊದಲ ಗೆಲವು ಕಂಡಿರುವ ಭಾರತ ತಂಡ ಶ್ರೀಲಂಕಾ ತಂಡವನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಲು ಕಾತರಿಸುತ್ತಿದೆ.

ಮೊದಲ ಪಂದ್ಯದಲ್ಲಿ 96 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಶರಣಾಗಿದ್ದ ಶ್ರೀಲಂಕಾ ತಂಡ ಒಂದು ವೇಳೆ ಈ ಪಂದ್ಯದಲ್ಲಿ ಮುಗ್ಗರಿಸಿದರೆ ಟೂರ್ನಿಯಿಂದ ಹೊರ ಬೀಳಲಿದೆ. ಹೀಗಾಗಿ ಏಂಜೆಲೊ ಮ್ಯಾಥ್ಯೂಸ್‌ ಪಡೆಯ ಪಾಲಿಗೆ ಇದು ‘ಮಾಡು ಇಲ್ಲವೇ ಮಡಿ’ ಹೋರಾಟವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry