ಫೋರ್ಬ್ಸ್‌ ಪಟ್ಟಿಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಸ್ಥಾನ

7

ಫೋರ್ಬ್ಸ್‌ ಪಟ್ಟಿಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಸ್ಥಾನ

Published:
Updated:
ಫೋರ್ಬ್ಸ್‌ ಪಟ್ಟಿಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಸ್ಥಾನ

ನ್ಯೂಯಾರ್ಕ್‌: ಫೋರ್ಬ್ಸ್‌ ನಿಯತಕಾಲಿಕೆ ಬಿಡುಗಡೆ ಮಾಡಿರುವ 2017ರ ‘ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರೀಡಾಳುಗಳ ಪಟ್ಟಿಯಲ್ಲಿ’ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯರಾಗಿ ಗುರುತಿಸಿಕೊಂಡಿದ್ದಾರೆ.

ಕೊಹ್ಲಿ ಅವರು ಪಟ್ಟಿಯಲ್ಲಿ 89ನೇ ಸ್ಥಾನ ಗಳಿಸಿದ್ದಾರೆ. ಇವರು ₹ 141.5 ಕೋಟಿ ಸಂಭಾವನೆ ಪಡೆದಿದ್ದಾರೆ. ಈ ಪೈಕಿ  ₹ 122 ಕೋಟಿ ವಿವಿಧ ಒಡಂಬಡಿಕೆಗಳಿಂದ ದೊರೆತಿದೆ.

ಕೊಹ್ಲಿ ಅವರನ್ನು ಭಾರತೀಯ ಕ್ರಿಕೆಟ್‌ನ ಪ್ರಮುಖ ವ್ಯಕ್ತಿ ಎಂದು ಫೋರ್ಬ್ಸ್ ಬಣ್ಣಿಸಿದೆ. ಅಲ್ಲದೆ, ಉತ್ತಮ ಆಟಕ್ಕಾಗಿ ಅವರನ್ನು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಜತೆ ಹೋಲಿಸಲಾಗಿದ್ದನ್ನು ಸಹ ಉಲ್ಲೇಖಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry