ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಲುವ ಉದ್ದೇಶಕ್ಕಾಗಿ ಜಾನುವಾರು ಮಾರಾಟ ನಿಷೇಧದ ವಿರುದ್ಧ ದಲಿತರು, ಮುಸ್ಲಿಮರನ್ನು ಒಗ್ಗೂಡಿಸಲು ಮುಂದಾದ ಜಿಗ್ನೇಶ್‌ ಮೇವಾನಿ

Last Updated 8 ಜೂನ್ 2017, 11:28 IST
ಅಕ್ಷರ ಗಾತ್ರ

ಅಹಮದಾಬಾದ್‌: ಕೊಲ್ಲುವ ಉದ್ದೇಶಕ್ಕಾಗಿ ಜಾನುವಾರು ಮಾರಾಟ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ದಲಿತರು ಹಾಗೂ ಮುಸ್ಲಿಮರನ್ನು ಒಗ್ಗೂಡಿಸಲು ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್‌ ಮೇವಾನಿ ಮುಂದಾಗಿದ್ದಾರೆ.

ಗುಜರಾತ್‌ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಂತದಲ್ಲೇ ಜಿಗ್ನೇಶ್‌ ಕೇಂದ್ರ ಸರ್ಕಾರದ ವಿರುದ್ಧ ದಲಿತರು ಮತ್ತು ಮುಸ್ಲಿಮರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಇಳಿದಿದ್ದಾರೆ.

ಬೆಹ್ರಾನ್‌ಪುರದಲ್ಲಿ ಬುಧವಾರ ರಾಷ್ಟ್ರೀಯ ದಲಿತ್ ಅಧಿಕಾರ ಮಂಚ್ (ಆರ್‌ಡಿಎಎಂ) ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಜಿಗ್ನೇಶ್‌, ‘ಉನಾದಲ್ಲಿ ದಲಿತರ ಮೇಲೆ ಅಮಾನುಷ ಹಲ್ಲೆ ಘಟನೆ ನಡೆದು ಒಂದು ವರ್ಷ ಸಮೀಪಿಸುತ್ತಿದೆ. ಆ ಘಟನೆ ನಡೆದಾಗ ದಲಿತರು ಮತ್ತು ಮುಸ್ಲಿಮರು ಒಟ್ಟಾಗಿ ಹೋರಾಟದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಿದ್ದರು’

‘ಆ ಹೋರಾಟ ಬಿಜೆಪಿ ಸರ್ಕಾರಕ್ಕೆ ಮುಖಭಂಗ ಮಾಡಿತ್ತು. ಈಗ ಕೊಲ್ಲುವ ಉದ್ದೇಶಕ್ಕಾಗಿ ಜಾನುವಾರು ಮಾರಾಟ ನಿಷೇಧಿಸಿರುವ ಕೇಂದ್ರದ ವಿರುದ್ಧ ಅಂಥದ್ದೇ ಒಗ್ಗಟ್ಟಿನ ಹೋರಾಟ ನಡೆಸಬೇಕಿದೆ’ ಎಂದರು.

ಬೆಹ್ರಾನ್‌ಪುರದ ವಸತಿ ಪ್ರದೇಶದ ಕಿರಿದಾದ ರಸ್ತೆಯಲ್ಲಿ ಈ ಸಭೆ ಆಯೋಜಿಸಲಾಗಿತ್ತು. ಇಫ್ತಾರ್‌ ಕೂಟ ಮುಗಿದ ಬಳಿಕ ಈ ಸಭೆ ಆರಂಭವಾಗಿತ್ತು. ಆದರೆ, ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಈ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT